Breaking News

T20 Worldcup: ಮೊದಲ‌ ಪಂದ್ಯದಲ್ಲಿ ಸುಲಭ ಜಯ ಸಾಧಿಸಿದ ಆಸ್ಟ್ರೇಲಿಯಾ

ಕೊಲೊಂಬೊ: ಬಲಿಷ್ಠ ಆಸ್ಟ್ರೇಲಿಯಾ ತಂಡ ಗೆಲುವಿನೊಂದಿಗೆ ಟಿ-20 ವಿಶ್ವಕಪ್ ಅಭಿಯಾನ ಪ್ರಾರಂಭಿಸಿದೆ. ಐರ್ಲೆಂಡ್ ತಂಡದ ವಿರುದ್ಧದ ಪಂದ್ಯದಲ್ಲಿ 67 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ.

ಇಲ್ಲಿನ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು‌. ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು‌.

Advertisement

ಇದನ್ನೂ ಓದಿ: ಮುಂದಿನ ಚುನಾವಣೆ ಸಿದ್ಧರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ: ಜಮೀರ್

ತಂಡದ ಪರ ಮಾರ್ಕಸ್ ಸ್ಟಾಯ್ನಿಸ್ 45, ಮ್ಯಾಟ್ ರಿನ್ಶ ಮತ್ತು ಜೋಶ್ ಇಂಗ್ಲಿಸ್ ತಲಾ 37, ಕೆಮರೂನ್ ಗ್ರೀನ್ 21 ರನ್ ಗಳಸಿದರು. ಐರ್ಲೆಂಡ್ ಪರ ಮಾರ್ಕ್ ಅಡೈರ್ 2, ಮ್ಯಾಥ್ಯೂಸ್ ಹಂಪೈರ್ಸ್, ಜಾರ್ಜ್ ಡಾಕ್ರೆಲ್ ಮತ್ತು ಹ್ಯಾರಿ ಟೆಕ್ಟರ್ ತಲಾ ಒಂದು ವಿಕೆಟ್ ಪಡೆದರು.

ಗುರಿ ಬೆನ್ನತ್ತಿದ ಐರ್ಲೆಂಡ್ ತಂಡ 16.5 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು‌ 115 ರ‌ನ್ ಗಳಿಸಿ 67 ರನ್‌ಗಳಿಂದ ಸೋಲೊಪ್ಪಿಕೊಂಡಿತು. ತಂಡದ ಪರ ಜಾರ್ಜ್ ಡಾಕ್ರೆಲ್ ಗರಿಷ್ಠ 41 ರನ್ ಗಳಿಸಿದರು. ಲೋಕನ್ ಟಕರ್ 24, ರೋಸ್ ಅಡೈರ್ ಮತ್ತು ಮಾರ್ಕ್ ಅಡೈರ್ ತಲಾ 12 ರನ್ ಗಳಿಸಿದರು. ಆಸ್ಟ್ರೇಲಿಯಾ ಪರ ಅಡಂ ಕಂಪಾ ಮತ್ತು ನಥನ್ ಎಲಿಸ್ ತಲಾ 4 ವಿಕೆಟ್, ಮ್ಯಾಥ್ಯು ಕುನ್ನಮನ್ ಒಂದು ವಿಕೆಟ್ ಪಡೆದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು