ವಿಟ್ಲ: ಕಾಲೇಜಿನಲ್ಲಿ ಸಹಪಾಠಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದು ಇಬ್ಬರು ವಿದ್ಯಾರ್ಥಿಗಳು ಚೂರಿ ಇರಿತಕ್ಕೊಳಗಾಗಿ ಗಾಯಗೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: T20 Worldcup: ಮೊದಲ ಪಂದ್ಯದಲ್ಲಿ ಸುಲಭ ಜಯ ಸಾಧಿಸಿದ ಆಸ್ಟ್ರೇಲಿಯಾ
ಖಾಸಗಿ ಕಾಲೇಜಿನಲ್ಲಿ ಸಹಪಾಠಿಗಳಾದ ಹೇಮಂತ್ (19) ಮತ್ತು ಅಪ್ರಾಪ್ತ ಪ್ರಾಯದ ವಿಧ್ಯಾರ್ಥಿಯು ಗೆಳೆಯರಾಗಿದ್ದು, ಅವರ ನಡುವೆ ಮಾತಿಗೆ ಮಾತು ಬೆಳೆದು ಜಗಳ ಉಂಟಾಗಿದೆ. ಈ ವೇಳೆ ಹೇಮಂತ್ ತನ್ನ ಬಳಿಯಿದ್ದ ಪೆನ್ ಚಾಕುವಿನಿಂದ ಅಪ್ರಾಪ ವಿಧ್ಯಾರ್ಥಿಯ ಬೆನ್ನಿನ ಭಾಗಕ್ಕೆ ಇರಿದಿದ್ದಾನೆ.

ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾನೆ. ಜಗಳವನ್ನು ತಡೆಯಲು ಯತ್ನಿಸಿದ ಮತ್ತೊಬ್ಬ ಅಪ್ರಾಪ್ತ ವಿಧ್ಯಾರ್ಥಿಗೆ ಸಣ್ಣ ಪ್ರಮಾಣದ ಗಾಯಗಳಾಗಿರುತ್ತದೆ. ಹೇಮಂತ್ ನ್ನು ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ-32/2026 ಕಲಂ115(1) 352 109 118(1) ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

