ಕರ್ನಾಟಕದಾದ್ಯಂತ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್

ಇಂದು ಮುಂಜಾನೆಯೇ ಕರ್ನಾಟಕದಾದ್ಯಂತ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ.ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಪ್ರಮುಖವಾಗಿ ಬೆಸ್ಕಾಂ (BESCOM) ಎಎಇ (AEE) ಒಬ್ಬರ ನಿವಾಸದ ಮೇಲೆ ದಾಳಿ ನಡೆದಿದ್ದು, ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಸ್ತಿ ಪಾಸ್ತಿ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಬೆಸ್ಕಾಂ ಮತ್ತು ಇತರ ಇಲಾಖೆಯ ಅಧಿಕಾರಿಗಳ ನಿವಾಸಗಳು, ಶಿವಮೊಗ್ಗ, ರಾಯಚೂರು, ಕಲಬುರಗಿದಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಉನ್ನತ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಚಿನ್ನಾಭರಣ, ಬೆಳ್ಳಿ ಮತ್ತು ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ. ನಿವೇಶನಗಳು, ಮನೆಗಳು ಮತ್ತು ಅಕ್ರಮವಾಗಿ ಮಾಡಲಾಗಿರುವ ಹೂಡಿಕೆಯ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಜತೆಗೆ ಬ್ಯಾಂಕ್ ಖಾತೆಗಳು ಮತ್ತು ಲಾಕರ್‌ಗಳ ವಿವರಗಳನ್ನು ಕಲೆಹಾಕಲಾಗುತ್ತಿದೆ.

ಇದನ್ನೂ ಓದಿ: ಮುಂದಿನ ಚುನಾವಣೆ ಸಿದ್ಧರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ: ಜಮೀರ್

ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತವು ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಅಧಿಕಾರಿಗಳು ನೀಡಿದ ಆದಾಯದ ಮಾಹಿತಿಗೂ ಮತ್ತು ಪ್ರಸ್ತುತ ಇರುವ ಆಸ್ತಿಗೂ ದೊಡ್ಡ ವ್ಯತ್ಯಾಸವಿರುವುದು ದಾಳಿಯ ವೇಳೆ ಕಂಡುಬಂದಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು