Breaking News

ಅರಂತೋಡು: ವಿಶೇಷ ಕಲಿಕಾ ಕೇಂದ್ರ ಲೋಕಾರ್ಪಣೆಗೊಳಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ, ಫೆ.12: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್‌ನಲ್ಲಿ ನಡೆದ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಭಾಗವಹಿಸಿ, ಗ್ರಾಮದ ಸಮಗ್ರ ಏಳಿಗೆಯ ಬಗ್ಗೆ ಮಹತ್ವದ ಆಶಯಗಳನ್ನು ಹಂಚಿಕೊಂಡಿದ್ದಾರೆ. ಈ ವೇಳೆ ಜಲ ಸಂರಕ್ಷಣೆ ಮತ್ತು ನಿರ್ವಹಣೆಯ ಮಹತ್ವ ಸಾರುವ ‘ಜಲ್ ಅರ್ಪಣ್ ದಿವಸ್’ ಆಚರಿಸಲಾಯಿತು. ಹಾಗೂ ಗ್ರಾಮದ ವಿದ್ಯಾರ್ಥಿಗಳು ಮತ್ತು ಜ್ಞಾನಾಸಕ್ತರಿಗಾಗಿ ವಿಶೇಷ ಕಲಿಕಾ ಕೇಂದ್ರವನ್ನು ಲೋಕಾರ್ಪಣೆ ಮಾಡಲಾಯಿತು.

Advertisement

ಈ ಕಾರ್ಯಕ್ರಮದ ಭಾಗವಾಗಿ ಪಂಚಾಯತ್‌ನ ಹಳೆಯ ಮತ್ತು ಪ್ರಮುಖ ದಾಖಲೆಗಳನ್ನು ವ್ಯವಸ್ಥಿತವಾಗಿ ಸಂರಕ್ಷಿಸಲು ಈ ಸುಸಜ್ಜಿತ ದಾಖಲೆ ಕೊಠಡಿಯನ್ನು ಕೂಡ ಉದ್ಘಾಟಿಸಲಾಯಿತು. ಇನ್ನು ಅರಂತೋಡು ಗ್ರಾಮ ಪಂಚಾಯತ್ ಮಾದರಿಯಾಗಿ ರೂಪುಗೊಳ್ಳುತ್ತಿದೆ. ಗ್ರಾಮಸ್ಥರ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಜಿಮ್ ಹಾಗೂ ಜ್ಞಾನಾರ್ಜನೆಗಾಗಿ ಗ್ರಂಥಾಲಯ ಮತ್ತು ಕಲಿಕಾ ಕೇಂದ್ರ. ಬಿಡುವಿನ ವೇಳೆಯಲ್ಲಿ ಸದುಪಯೋಗ ಪಡಿಸಿಕೊಳ್ಳಲು ಮನರಂಜನಾ ಕೇಂದ್ರಗಳನ್ನು ಕೂಡ ನೀಡಲಾಗಿದೆ.

ಇದನ್ನೂ ಓದಿ: ರಾಮಕುಂಜ: ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆ, ಕಾಮಗಾರಿಗಳ ಉದ್ಘಾಟನೆ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ, ಗ್ರಾಮ ಪಂಚಾಯಿತಿ ಮತ್ತು ಸಹಕಾರಿ ಸಂಘಗಳು (Society) ಕೈಜೋಡಿಸಿ ಕೆಲಸ ಮಾಡಿದಾಗ ಮಾತ್ರ ಗ್ರಾಮದ ನೈಜ ಅಭಿವೃದ್ಧಿ ಸಾಧ್ಯ, ಮಹಿಳೆಯರು ಮತ್ತು ಯುವಕರು ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅವರ ಮಾನಸಿಕ ಆರೋಗ್ಯ ಮತ್ತು ಸಾಮಾಜಿಕ ಸಬಲೀಕರಣಕ್ಕೆ ಪೂರಕ. ಕಡಬ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರಗಳನ್ನು ರಾಜ್ಯದಲ್ಲೇ ಮಾದರಿಯಾಗಿ ನಿರ್ಮಿಸಲು ನಾವು ಬದ್ಧರಾಗಿದ್ದೇವ. ಇನ್ನು ಅಧಿಕಾರಿಗಳು, ಜನಪ್ರತಿನಿಧಿಗಳು, ರೈತರು ಮತ್ತು ಸಾರ್ವಜನಿಕರು ಒಟ್ಟಾಗಿ ಶ್ರಮಿಸಿದರೆ ಸುಳ್ಯ ತಾಲೂಕನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಬಹುದು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು