Breaking News

T20 Worldcup: ಇಶನ್ ಕಿಶನ್, ಹಾರ್ದಿಕ್ ಪಾಂಡ್ಯ ಅರ್ಧಶತಕ , ಭಾರತಕ್ಕೆ ಎರಡನೇ ಜಯ

ನವದೆಹಲಿ: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಎರಡನೇ ಜಯ ದಾಖಲಿಸಿದೆ. ಇಂದು ನಡೆದ ಪಂದ್ಯದಲ್ಲಿ ನಮಿಬಿಯಾ ತಂಡವನ್ನು 93 ರನ್‌ಗಳಿಂದ ಪರಾಭವಗೊಳಿಸಿದೆ.

ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು. 209 ರನ್ ಗಳಿಸಿತು. ಗುರಿ ಬೆನ್ನಟ್ಟಿದ ನಮಿಬಿಯಾ 18.2 ಓವರ್‌ಗಳಲ್ಲಿ 116 ರನ್‌ಗೆ ಆಲ್ ಔಟ್ ಆಯಿತು.

Advertisement

ಭಾರತದ ಪರ ವರುಣ್ ಚಕ್ರವರ್ತಿ 3, ಹಾರ್ದಿಕ್ ಪಾಂಡ್ಯ ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಪಡೆದರೆ, ಜಸ್ಟೀತ್ ಬೂಮ್ರಾ, ಹರ್ಷದೀಪ್ ಸಿಂಗ್, ಶಿವಂ ದುಬೆ ತಲಾ ಒಂದು ವಿಕೆಟ್ ಪಡೆದರು.

ಮೊದಲು ಬ್ಯಾಟ್ ಮಾಡಿದ ಭಾರತ ಪರ ಇಶಾನ್ ಕಿಸನ್ ಹಾಗೂ ಹಾರ್ದಿಕ್ ಪಾಂಡ್ಯ ಆಕರ್ಷಕ ಅರ್ಧ ಶತಕ ದಾಖಲಿಸಿದರು. ಕಿಶನ್ 24 ಎಸೆತಗಳಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 61 ರನ್ ಬಾರಿಸಿದರೆ, ಹಾರ್ದಿಕ್ ಪಾಂಡ್ಯ 28 ಎಸೆತಗಳಲ್ಲಿ ತಲಾ 4 ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 53 ರನ್ ಗಳಿಸಿದರು. ನಮಿಬಿಯಾ ನಾಯಕ ಎರಸ್ಮಸ್ 4 ವಿಕೆಟ್ ಪಡೆದರು.

ಇದರೊಂದಿಗೆ ಭಾರತ ತಂಡ ಆಡಿದ ಎರಡೂ ಪಂದ್ಯಗಳನ್ನು ಗೆದ್ದು ಅಂಕ ಪಟ್ಟಿಯಲ್ಲಿ ಅಗ್ರಸ್ಥಾ‌ನ ಪಡೆದಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು