Breaking News

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್​​​ಪಿ ಪಕ್ಷ ಭರ್ಜರಿ ಜಯ: ಪ್ರಧಾನಿ ಮೋದಿ ಶುಭಾಶಯ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ತಾರಿಕ್ ರೆಹಮಾನ್ ನೇತೃತ್ವದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (BNP) ಭರ್ಜರಿ ಜಯ ದಾಖಲಿಸಿದೆ. ಈ ಹಿನ್ನೆಲೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಾರಿಕ್ ರೆಹಮಾನ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡುವ ಮೂಲಕ, “ಬಾಂಗ್ಲಾದೇಶದ ಸಂಸದೀಯ ಚುನಾವಣೆಯಲ್ಲಿ ಬಿಎನ್‌ಪಿ ಪಕ್ಷವನ್ನು ನಿರ್ಣಾಯಕ ವಿಜಯದತ್ತ ಮುನ್ನಡೆಸಿದ ತಾರಿಕ್ ರೆಹಮಾನ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಈ ವಿಜಯವು ನಿಮ್ಮ ನಾಯಕತ್ವದ ಮೇಲೆ ಬಾಂಗ್ಲಾದೇಶದ ಜನರು ಇಟ್ಟಿರುವ ನಂಬಿಕೆಯನ್ನು ತೋರಿಸುತ್ತದೆ” ಎಂದು ತಿಳಿಸಿದ್ದಾರೆ.

ಬಾಂಗ್ಲಾದೇಶದೊಂದಿಗೆ ಸುಸ್ಥಿರ ಬಾಂಧವ್ಯವನ್ನು ಮುಂದುವರಿಸುವ ಆಶಯ ವ್ಯಕ್ತಪಡಿಸಿರುವ ಮೋದಿ, “ಪ್ರಜಾಪ್ರಭುತ್ವವಾದಿ, ಪ್ರಗತಿಪರ ಮತ್ತು ಒಳಗೊಳ್ಳುವಿಕೆಯ (Inclusive) ಬಾಂಗ್ಲಾದೇಶಕ್ಕೆ ಭಾರತದ ಬೆಂಬಲ ಸದಾ ಇರಲಿದೆ. ಉಭಯ ದೇಶಗಳ ಸಾಮಾನ್ಯ ಅಭಿವೃದ್ಧಿ ಗುರಿಗಳನ್ನು ಸಾಧಿಸಲು ನಾವು ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ” ಎಂದು ಭರವಸೆ ನೀಡಿದ್ದಾರೆ.

Advertisement

ಇದನ್ನೂ ಓದಿ: ಫ್ಲೋರಿಡಾ ಗಾಲ್ಫ್​ ಕೋರ್ಸ್​​ನಲ್ಲಿ ಟ್ರಂಪ್ ಹತ್ಯೆಗೆ ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಪ್ರಧಾನಿ ಮೋದಿ ಪೋಸ್ಟ್:

ಸುಮಾರು 17 ವರ್ಷಗಳ ವನವಾಸದ ನಂತರ ತಾರಿಕ್ ರೆಹಮಾನ್ ಬಾಂಗ್ಲಾದೇಶದ ಪ್ರಧಾನಿಯಾಗಲು ಸಜ್ಜಾಗಿದ್ದಾರೆ.ಈ ಹಿಂದೆ ಶೇಖ್ ಹಸೀನಾ ಅವರ ಆಳ್ವಿಕೆಯಲ್ಲಿ ತಾರಿಕ್ ರೆಹಮಾನ್ ಮೇಲೆ ಅನೇಕ ಪ್ರಕರಣಗಳು ದಾಖಲಾಗಿದ್ದವು, ಈಗ ಬಿಎನ್‌ಪಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಿದೆ.ಶೇಖ್ ಹಸೀನಾ ಅವರ ಪದಚ್ಯುತಿಯ ನಂತರ ಬಾಂಗ್ಲಾದೇಶದಲ್ಲಿ ಉಂಟಾಗಿದ್ದ ಅಸ್ಥಿರತೆಯ ನಡುವೆ, ಹೊಸ ಸರ್ಕಾರದೊಂದಿಗೆ ಭಾರತವು ಹೇಗೆ ಸಂಬಂಧಗಳನ್ನು ಮರುಸ್ಥಾಪಿಸಲಿದೆ ಎಂಬುದು ಕುತೂಹಲಕಾರಿಯಾಗಿದೆ. ಹಿಂದಿನ ಬಿಎನ್‌ಪಿ ಆಡಳಿತದ ಅವಧಿಯಲ್ಲಿ ಭಾರತದೊಂದಿಗೆ ಕೆಲವು ಭಿನ್ನಾಭಿಪ್ರಾಯಗಳಿದ್ದರೂ, ಈಗ ತಾರಿಕ್ ರೆಹಮಾನ್ ಅವರು “ಬಾಂಗ್ಲಾದೇಶ ಫಸ್ಟ್” ನೀತಿಯೊಂದಿಗೆ ಸ್ನೇಹದ ಹಸ್ತ ಚಾಚಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು