ಶಿವಮೊಗ್ಗ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ.
ಹೊಸನಗರ ತಾಲೂಕಿನ ಮಳಲಿ ಗ್ರಾಮದ ನಿವಾಸಿ ಹಾಗೂ ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಬಂಧಿತ ಆರೋಪಿ. ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯವು ಆರೋಪಿಗೆ ಫೆಬ್ರವರಿ 24, 2026 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಬಾಂಗ್ಲಾದೇಶ: ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆಗೆ ಏರಿದ ಬಿಎನ್‌ಪಿ
ರಾಜೇಶ್ ಹಿರಿಮನೆ ರಾಹುಲ್ ಗಾಂಧಿ ಅವರ ಮುಖದ ಅರ್ಧ ಭಾಗ ಹಾಗೂ ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿದ ಅಧಿಕಾರಿ ‘ಅಸಿಮ್’ ಫೋಟೋವನ್ನು ಎಡಿಟ್ ಮಾಡಿ ಒಂದಕ್ಕೊಂದು ಸೇರಿಸಿದ್ದರು. ಈ ವಿವಾದಾತ್ಮಕ ಚಿತ್ರಕ್ಕೆ “ONE AGENDA” ಎಂಬ ಟ್ಯಾಗ್ ಲೈನ್ ನೀಡಿ ಫೇಸ್‌ಬುಕ್‌ನಲ್ಲಿ ಹರಿಬಿಡಲಾಗಿತ್ತು. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಆಕ್ಷೇಪಾರ್ಹ ಪೋಸ್ಟ್ ಗಮನಿಸಿದ ಹೊಸನಗರ-ನಗರ ಪೊಲೀಸರು, ಮೇ 20, 2025 ರಂದೇ ಬಿಎನ್‌ಎಸ್ (BNS) ಕಾಯ್ದೆಯ ಸೆಕ್ಷನ್ 353(2) ರ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದರು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

