Breaking News

ರಾಜಸ್ಥಾನ: ವಿಧಾನಸಭೆ ಕಲಾಪದ ವೇಳೆ ಅಸಭ್ಯ ಸನ್ನೆ ಮಾಡಿದ ಕಾಂಗ್ರೆಸ್ ಶಾಸಕ ರೋಹಿತ್ ಬೊಹ್ರಾ

ಜೈಪುರ: ರಾಜಸ್ಥಾನ ವಿಧಾನಸಭೆಯ ಪವಿತ್ರತೆಯನ್ನು ಕೆಡಿಸುವಂತಹ ಅಸಭ್ಯ ವರ್ತನೆ ತೋರಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ರೋಹಿತ್ ಬೊಹ್ರಾ ವಿರುದ್ಧ ವಿಧಾನಸಭೆಯ ಸಭಾಧ್ಯಕ್ಷರಾದ (ಸ್ಪೀಕರ್) ವಾಸುದೇವ ದೇವನಾನಿ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಸದನದ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ರೋಹಿತ್ ಬೊಹ್ರಾ ಅವರು ಅತ್ಯಂತ ಅಸಭ್ಯ ಹಾಗೂ ಅಶಿಸ್ತಿನ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಶಾಸಕರ ಈ ನಡವಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಸ್ಪೀಕರ್ ವಾಸುದೇವ ದೇವನಾನಿ ಅವರು, “ಸದನವು ಪ್ರಜಾಪ್ರಭುತ್ವದ ದೇವಾಲಯವಿದ್ದಂತೆ, ಇಲ್ಲಿ ಅಶಿಸ್ತನ್ನು ಸಹಿಸಲು ಸಾಧ್ಯವಿಲ್ಲ” ಎಂದು ಕಿಡಿಕಾರಿದ್ದಾರೆ.

ಈ ಘಟನೆಯ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ವಿಧಾನಸಭೆಯ ಕಾರ್ಯದರ್ಶಿಗೆ ಸ್ಪೀಕರ್ ಸೂಚಿಸಿದ್ದಾರೆ. ಸದನದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಶಾಸಕರು ಸದನದ ಗೌರವಕ್ಕೆ ಹೇಗೆ ಧಕ್ಕೆ ತಂದಿದ್ದಾರೆ ಎಂಬ ಬಗ್ಗೆ ವಿಸ್ತೃತ ತನಿಖೆ ನಡೆಸಲು ನಿರ್ಧರಿಸಲಾಗಿದೆ. ತನಿಖಾ ವರದಿಯ ಆಧಾರದ ಮೇಲೆ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

Advertisement

ಇದನ್ನೂ ಓದಿ: ತ್ರಿಕೋನ ಪ್ರೇಮ: ಹಳೆ ಗರ್ಲ್‌ಫ್ರೆಂಡ್‌ ಜೊತೆ ಸೇರಿ ಪ್ರಿಯತಮೆಯ ಗುಂಡಿಕ್ಕಿ ಕೊಂದ ಲವ್ವರ್

ಇಲ್ಲಿದೆ ನೋಡಿ ವಿಡಿಯೋ:

ಈ ಘಟನೆಯು ರಾಜಸ್ಥಾನ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ತನ್ನ ಶಾಸಕರಿಗೆ ಸದನದ ಘನತೆಯನ್ನು ಕಾಪಾಡುವುದನ್ನು ಕಲಿಸಲಿ ಎಂದು ಬಿಜೆಪಿ ಲೇವಡಿ ಮಾಡಿದೆ. ಮತ್ತೊಂದೆಡೆ, ಕಾಂಗ್ರೆಸ್ ಈ ಆರೋಪಗಳನ್ನು ರಾಜಕೀಯ ಪ್ರೇರಿತ ಎಂದು ಹೇಳುತ್ತಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು