ಕೊಡಗು: ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಸೋಮವಾರಪೇಟೆ ಸಮೀಪದ ಕೂತಿ ಗ್ರಾಮದ ಸಿ.ಜೆ. ಸಂದೀಪ್ (41) ಮೃತಪಟ್ಟ ದುರ್ದೈವಿ. ಕಾಫಿ ತೋಟದಲ್ಲಿ ಕೆಲಸ ಮುಗಿಸಿ ದೊಡ್ಡ ತೋಳೂರು ಗ್ರಾಮದ ಪ್ರಸನ್ನ ಅವರನ್ನು ಮನೆಗೆ ಬಿಡಲು ಸಂದೀಪ್ ತಮ್ಮ ಬೈಕಿನಲ್ಲಿ ತೆರಳುತ್ತಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ‘ಸಾಧನಾ ಸಮಾವೇಶ’: ನಮ್ಮ ಐದು ಗ್ಯಾರಂಟಿ ಯೋಜನೆಗಳು ಇಂದು ಇಡೀ ದೇಶಕ್ಕೆ ಮಾದರಿ: ಡಿಕೆ ಶಿವಕುಮಾರ್
ಈ ವೇಳೆ ತೋಳೂರು-ಶೆಟ್ಟಳ್ಳಿ ಸಮೀಪದ ಇನಕನಹಳ್ಳಿ ಬಳಿ ಮುಖ್ಯರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ನಿಯಂತ್ರಣ ತಪ್ಪಿ ಅಪ್ಪಳಿಸಿದೆ. ಡಿಕ್ಕಿ ಹೊಡೆದ ಪರಿಣಾಮ ಸಂದೀಪ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ಹಿಂಬದಿ ಸವಾರ ಪ್ರಸನ್ನ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

