ಫೆಬ್ರವರಿ 16, 2026, ಸೋಮವಾರದ ಭವಿಷ್ಯ ಇಲ್ಲಿದೆ. ಇಂದು ಬಹುತೇಕ ರಾಶಿಗಳಿಗೆ ವೃತ್ತಿ ಜೀವನದಲ್ಲಿ ಪ್ರಗತಿ ಕಂಡುಬಂದರೆ, ಕೆಲವು ರಾಶಿಗಳು ಆರೋಗ್ಯ ಮತ್ತು ಆರ್ಥಿಕ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಅವಶ್ಯಕ.
ಮೇಷ: ಹೊಸ ಉದ್ಯೋಗಾವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ವೃಷಭ: ಆರ್ಥಿಕವಾಗಿ ಲಾಭದಾಯಕ ದಿನ. ಹಳೆಯ ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ.
ಮಿಥುನ; ಕೆಲಸದ ಒತ್ತಡ ಹೆಚ್ಚಿರಲಿದೆ. ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಉಂಟಾಗಬಹುದು, ತಾಳ್ಮೆಯಿರಲಿ.
ಕರ್ಕಾಟಕ ; ವಿದ್ಯಾರ್ಥಿಗಳಿಗೆ ಉತ್ತಮ ದಿನ. ದೈವಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದ್ದು, ಮಾನಸಿಕ ಶಾಂತಿ ದೊರೆಯಲಿದೆ.
ಸಿಂಹ; ವ್ಯಾಪಾರದಲ್ಲಿ ಲಾಭ ಕಂಡುಬರಲಿದೆ. ದೂರದ ಪ್ರಯಾಣದ ಸಾಧ್ಯತೆ ಇದೆ, ವಾಹನ ಚಾಲನೆಯಲ್ಲಿ ಜಾಗ್ರತೆ.
ಕನ್ಯಾ; ಆಸ್ತಿ ವಿಷಯದಲ್ಲಿ ಶುಭ ವಾರ್ತೆ ಕೇಳುವಿರಿ. ಕಚೇರಿಯಲ್ಲಿ ಸಹೋದ್ಯೋಗಿಗಳ ಬೆಂಬಲ ದೊರೆಯಲಿದೆ.
ತುಲಾ; ಖರ್ಚುಗಳು ಹೆಚ್ಚಾಗಬಹುದು, ಬಜೆಟ್ ಬಗ್ಗೆ ಗಮನವಿರಲಿ. ಪ್ರೇಮ ಜೀವನದಲ್ಲಿ ಮಧುರತೆ ಇರಲಿದೆ.
ವೃಶ್ಚಿಕ: ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ ಪಡೆಯುವಿರಿ. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯಲಿವೆ.
ಧನು: ಹೊಸ ಹೂಡಿಕೆಗೆ ಇಂದು ಸಕಾಲವಲ್ಲ. ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ, ಆಹಾರದ ಬಗ್ಗೆ ನಿಗಾ ಇರಲಿ.
ಮಕರ: ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.
ಕುಂಭ: ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ದಿನವಿದು.
ಮೀನ: ಮನಸ್ಸಿನಲ್ಲಿ ಗೊಂದಲಗಳಿರಬಹುದು. ಧ್ಯಾನ ಮತ್ತು ಯೋಗದ ಮೂಲಕ ಏಕಾಗ್ರತೆ ಬೆಳೆಸಿಕೊಳ್ಳಿ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

