ಬೆಂಗಳೂರು: ಕನ್ನಡ ಕಿರುತೆರೆಯ ಉದಯೋನ್ಮುಖ ಮತ್ತು ಜನಪ್ರಿಯ ನಟಿ ರಶ್ಮಿ ಲೀಲಾ (Rashmi Leela) ಅವರು ಇಂದು (ಫೆಬ್ರವರಿ 16, 2026) ನಿಧನರಾಗಿದ್ದಾರೆ. ಅವರ ಅಕಾಲಿಕ ಸಾವು ಅಭಿಮಾನಿಗಳು ಮತ್ತು ಚಿತ್ರರಂಗದ ಸಹೋದ್ಯೋಗಿಗಳನ್ನು ತೀವ್ರ ದುಃಖದಲ್ಲಿ ಮುಳುಗಿಸಿದೆ.ಪ್ರಾಥಮಿಕ ವರದಿಗಳ ಪ್ರಕಾರ, ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ
ರಶ್ಮಿ ಲೀಲಾ ಅವರು ಕನ್ನಡದ ಹಲವು ಪ್ರಸಿದ್ಧ ಧಾರಾವಾಹಿಗಳಲ್ಲಿ ಅಭಿನಯಿಸುವ ಮೂಲಕ ಮನೆಮಾತಾಗಿದ್ದರು. ತಮ್ಮ ನೈಸರ್ಗಿಕ ಅಭಿನಯ ಮತ್ತು ಸೌಮ್ಯ ಸ್ವಭಾವದಿಂದ ಕಿರುತೆರೆ ಪ್ರೇಕ್ಷಕರ ಮನ ಗೆದ್ದಿದ್ದರು. ಕೇವಲ ಕಿರುತೆರೆ ಮಾತ್ರವಲ್ಲದೆ, ಸಿನಿಮಾಗಳಲ್ಲೂ ಸಣ್ಣಪುಟ್ಟ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದರು.

ಇದನ್ನೂ ಓದಿ: ಚಿತ್ರರಂಗದ ಮೇಲಿನ ಟ್ಯಾಕ್ಸ್ ಪ್ರಶ್ನೆಗೆ ಜಯ ಬಚ್ಚನ್ ವಿರುದ್ಧ ಕೆರಳಿ ಕೆಂಡವಾದ ನಿರ್ಮಲಾ ಸೀತಾರಾಮನ್
ರಶ್ಮಿ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು, ಕಿರುತೆರೆ ಕಲಾವಿದರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ತೀವ್ರ ಸಂತಾಪ ಸೂಚಿಸುತ್ತಿದ್ದಾರೆ. “ಒಬ್ಬ ಪ್ರತಿಭಾವಂತ ಕಲಾವಿದೆಯನ್ನು ನಾವು ಕಳೆದುಕೊಂಡಿದ್ದೇವೆ” ಎಂದು ಅನೇಕರು ಕಂಬನಿ ಮಿಡಿದಿದ್ದಾರೆ.
ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

