ಕರ್ನಾಟಕ ಬಜೆಟ್ 2026: ಮಾರ್ಚ್ 6 ರಿಂದ ಅಧಿವೇಶನ ಆರಂಭ; ಸಿದ್ದರಾಮಯ್ಯರಿಂದ ದಾಖಲೆಯ 17ನೇ ಬಜೆಟ್ ಮಂಡನೆ!

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯ ತೀರ್ಮಾನದಂತೆ, 2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಅಧಿವೇಶನವು ಮಾರ್ಚ್ 6 ರಿಂದ ಮಾರ್ಚ್ 27 ರವರೆಗೆ ನಡೆಯಲಿದೆ. ಈ ಕುರಿತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ.ಅಧಿವೇಶನದ ಮೊದಲ ದಿನವಾದ ಮಾರ್ಚ್ 6, 2026 ರಂದು ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಸಿದ್ದರಾಮಯ್ಯ ಅವರು ರಾಜ್ಯ ಆಯವ್ಯಯವನ್ನು ಮಂಡಿಸಲಿದ್ದಾರೆ.

ಇದು ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದೆ. ಆ ಮೂಲಕ ಅತೀ ಹೆಚ್ಚು ಬಾರಿ ರಾಜ್ಯ ಬಜೆಟ್ ಮಂಡಿಸಿದ ಹಣಕಾಸು ಸಚಿವ ಎಂಬ ಹೆಗ್ಗಳಿಕೆಗೆ ಅವರು ಮತ್ತೊಮ್ಮೆ ಪಾತ್ರರಾಗಲಿದ್ದಾರೆ.ಒಟ್ಟು 14 ದಿನಗಳ ಕಾಲ ಕಲಾಪ ನಡೆಯಲಿದ್ದು, ಮಾರ್ಚ್ 27ಕ್ಕೆ ಅಧಿವೇಶನ ಮುಕ್ತಾಯಗೊಳ್ಳಲಿದೆ.

Advertisement

ಇದನ್ನೂ ಓದಿ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ಜಾತಿ ನಿಂದನೆ: ಕಾಂಗ್ರೆಸ್ ಶಾಸಕ ಅಶೋಕ್ ರೈ ವಿರುದ್ಧ ಬಿಜೆಪಿ ದೂರು

ರಾಜ್ಯದ ಆರ್ಥಿಕ ಸ್ಥಿತಿಗತಿ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಮತ್ತು ಬರಪೀಡಿತ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್ ಕುರಿತು ಈ ಬಜೆಟ್‌ನಲ್ಲಿ ಮಹತ್ವದ ಘೋಷಣೆಗಳನ್ನು ನಿರೀಕ್ಷಿಸಲಾಗಿದೆ.ದೇವನಹಳ್ಳಿ ತಾಲೂಕಿನ 13 ಗ್ರಾಮಗಳ ಸುಮಾರು 1,777 ಎಕರೆ ಭೂಮಿಯನ್ನು ‘ಶಾಶ್ವತ ವಿಶೇಷ ಕೃಷಿ ವಲಯ’ ಎಂದು ಘೋಷಿಸಲು ನಿರ್ಧರಿಸಲಾಗಿದೆ. ಬೆಂಗಳೂರು ಟರ್ಫ್ ಕ್ಲಬ್ ಅನ್ನು ತುಮಕೂರು ಜಿಲ್ಲೆಯ ಕುಣಿಗಲ್‌ಗೆ ಸ್ಥಳಾಂತರಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

Advertisement

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು