Breaking News

13 ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರಿಂದ ಅತ್ಯಾಚಾರ

13-year-old girl physically abused by three minor boys hubli

ಹುಬ್ಬಳ್ಳಿ: ನಿರ್ಜನ ಪ್ರದೇಶಕ್ಕೆ ಕರೆದೊಯ್ದು 13 ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಬಾಲಕಿಯ ಪೋಷಕರು ಇಲ್ಲದಿದ್ದಾಗ, ಅದೇ ಪ್ರದೇಶದಲ್ಲಿ ವಾಸಿಸುವ 14 ರಿಂದ 15 ವರ್ಷದ ಮೂವರು ಬಾಲಕರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

Advertisement

ಘಟನೆ ಕುರಿತು ಮಾತನಾಡಿದ ಹುಬ್ಬಳ್ಳಿಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್, 12-13 ವರ್ಷದ ಬಾಲಕಿಗೆ ರಕ್ಷಣೆ ನೀಡಲಾಗಿದ್ದು, ಮೂವರು ಬಾಲಕರನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಉಡುಪಿ: ಕಾರು ರಿವರ್ಸ್‌ ತೆಗೆಯುವಾಗ ಡೆಡ್ಲಿ ಸರಣಿ ಅಪಘಾತ! ವಿಡಿಯೋ ಇಲ್ಲಿದೆ

ಮೂವರಲ್ಲಿ ಇಬ್ಬರು ಬಾಲಕರು, ಸಂತ್ರಸ್ತೆ ಓದುತ್ತಿರುವ ಪ್ರೌಢಶಾಲೆಯ ವಿದ್ಯಾರ್ಥಿಗಳಾಗಿದ್ದು, ಮತ್ತೊಬ್ಬ  ಶಾಲೆ ಬಿಟ್ಟಿರುವಂತೆ ತೋರುತ್ತಿದೆಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ

ಅತ್ಯಾಚಾರದ ವಿಡಿಯೋ ತಮ್ಮ ಬಳಿ ಇದೆ ಎಂದು ಹುಡುಗರು ಬಾಲಕಿಗೆ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ದೂರಿನಲ್ಲಿ ಆರೋಪಿಸಿದ್ದಾರೆ. ಆರೋಪಿಗಳ ಮೊಬೈಲ್ಗಳನ್ನು ಕೂಡ ವಶಪಡಿಸಿಕೊಳ್ಳಲಾಗುವುದು ಮತ್ತು ಹೆಚ್ಚಿನ ತನಿಖೆ ನಡೆಸಲಾಗುವುದುಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

News Source : NDTV

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು