Breaking News

ನಮಗೆ ನ್ಯಾಯ ಒದಗಿಸಿ: ಗೃಹ ಸಚಿವರನ್ನ ಕೋರಿದ ಸುಮಂತ್ ಪೋಷಕರು

ಬೆಳ್ತಂಗಡಿ: ಧನು ಪೂಜೆಗೆ ತೆರಳುತ್ತಿದ್ದ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣ ತನಿಖೆ ಚುರುಕುಗೊಳಿಸುವಂತೆ ಪೋಷಕರು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರನ್ನು ಕೋರಿದ್ದಾರೆ.

ಇದನ್ನೂ ಓದಿ: T20 Worldcup: ಯುವರಾಜ್ ಸಮ್ರ ಶತಕದ ಹೊರತಾಗಿಯೂ ಪಂದ್ಯ ಕೈಚೆಲ್ಲಿದ ಕೆನಡಾ

Advertisement

ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ಎಂಬಲ್ಲಿ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿ ಸುಮಂತ್ ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಹೋಗುವ ತೋಟದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಪ್ರಕರಣದ ತನಿಖೆಯು ನಿಧಾನಗತಿಯಲ್ಲಿ ಸಾಗುತ್ತಿದೆ, ಕೂಡಲೇ ಆರೋಪಿಗಳನ್ನು ಪತ್ತೆಹಚ್ಚಿ ನಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಬಾಲಕನ ಪೋಷಕರು ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ನೇತೃತ್ವದಲ್ಲಿ ಫೆ.17 ರಂದು ಮಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರವರನ್ನು  ಭೇಟಿಯಾಗಿ ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಯಾದ ಅರುಣ್ ಕುಮಾರ್ ಮತ್ತು ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ರವರಿಂದ ಗೃಹಸಚಿವರು ತನಿಖಾ ವರದಿಯನ್ನು ಕೇಳಿ ತಿಳಿದುಕೊಂಡರು.

ಅರುಣ್ ಕುಮಾರ್ ರವರು ಪ್ರತ್ಯೇಕ ತನಿಖಾ ತಂಡ ಇಲ್ಲಿಯವರೆಗೆ ಮಾಡಿರುವ ತನಿಖೆಯ ಪ್ರಗತಿ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಗೃಹ ಸಚಿವರು ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸುವುದರ ಬಗ್ಗೆ ನಿರ್ದೇಶನವನ್ನು ನೀಡಿದರು ಮತ್ತು ನೊಂದ ಪೋಷಕರಿಗೆ ಸಾಂತ್ವನ ಕೂಡ ಹೇಳಿದರು.

ಈ ಸಂದರ್ಭದಲ್ಲಿ ನಾಳ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್‌ ಕುಮಾರ್, ದ.ಕ.ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಹಾಜರಿದ್ದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

 

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು