ಬೆಂಗಳೂರು: ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಇದನ್ನೂ ಓದಿ: T20 Worldcup: ಸ್ಕಾಟ್ಲೆಂಡ್ ವಿರುದ್ಧ ಐತಿಹಾಸಿಕ ಗೆಲುವು ದಾಖಲಿಸಿದ ನೇಪಾಳ

ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬಿಡುಗಡೆ ಮಾಡಿದ್ದ ‘ಕರಪ್ಶನ್ ರೇಟ್ ಕಾರ್ಡ್’ ಜಾಹೀರಾತನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪರವಾಗಿ ಕೇಶವಪ್ರಸಾದ್ ಎಂಬುವವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ, ಪ್ರಕರಣದ ಸ್ವರೂಪ ಮತ್ತು ದಾಖಲೆಗಳನ್ನು ಪರಿಗಣಿಸಿ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮೇ 5, 2023 ರಂದು ಪತ್ರಿಕಾ ಜಾಹೀರಾತುಗಳ ಮೂಲಕ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಲಾಗಿತ್ತು. ಈ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ), ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದೂರು ದಾಖಲಿಸಿತ್ತು. ಗುತ್ತಿಗೆದಾರರಿಂದ ಬಿಜೆಪಿ 40 ಪರ್ಸೆಂಟ್ ಕಮಿಷನ್ ಬೇಡಿಕೆ ಇಟ್ಟಿದೆ ಎಂದು ಜಾಹೀರಾತುಗಳಲ್ಲಿ ಆರೋಪಿಸಲಾಗಿತ್ತು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

