Breaking News

ಅಖಿಲ ಭಾರತ ಗೇರು ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಗಂಗಾಧರ ನಾಯಕ್‌ ಆಯ್ಕೆ

Gangadhar Nayak elected as President of All India Cashew Growers Association

ಪುತ್ತೂರು: ಅಖಿಲ ಭಾರತ ಗೇರು ಬೆಳೆಗಾರರ ಸಂಘದ (AICGA) ಅಧ್ಯಕ್ಷರಾಗಿ ಪುತ್ತೂರು ಗೇರು ಸಂಶೋಧನಾ ಕೇಂದ್ರದ ನಿವೃತ್ತ ನಿರ್ದೇಶಕ ಗಂಗಾಧರ ನಾಯಕ್ ಎಂ. ಹಾಗೂ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಗೇರು ಬೆಳೆಗಾರರೂ ಆಗಿರುವ ವಾಣಿಜ್ಯೋದ್ಯಮಿ ವಿಶ್ವ ಕೇಶವ ಕುರುವೇರಿ ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ದೇವಿಪ್ರಸಾದ್ ಕಲ್ಲಾಜೆ ಆಯ್ಕೆಯಾಗಿದ್ದಾರೆ.

ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಂಘದ ವತಿಯಿಂದ ಈಗಾಗಲೇ ಸರಕಾರಕ್ಕೆ ಗೇರು ಹಣ್ಣಿನ ಫೆನ್ನಿ ತಯಾರಿಕೆಗೆ ಲೈಸನ್ಸ್ ನೀಡುವಂತೆ ಮನವಿ ಮಾಡಲಾಗಿದೆ. ಈ ಸಂಬಂಧ ಇನ್ನಷ್ಟು ಕಾರ್ಯತಂತ್ರ ರೂಪಿಸಲು ಜ.3 ರಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Advertisement

ಇದನ್ನೂ ಓದಿ: ಬಂಟ್ವಾಳ: ಮಂಚಿ ಗ್ರಾಮ ಮಟ್ಟದ ಟೈಲರಿಂಗ್‌ ತರಬೇತಿ ಉದ್ಘಾಟನೆ

ಸಂಘದ ಸಭೆಯಲ್ಲಿ ಕ್ಯಾಂಪ್ಕೊ ಮಾಜಿ ಉಪಾಧ್ಯಕ್ಷ ಶಂಕರ ನಾರಾಯಣ ಭಟ್ ಖಂಡಿಗೆ ಮತ್ತು ಹಿರಿಯ ಗೇರು ಬೆಳೆಗಾರ ಶುಭಾಶ್ ರೈ ಕಡಮಜಲು ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

(ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ  ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com)

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು