Breaking News

ಪುತ್ತೂರು: ತೋಟದಲ್ಲಿ ಕೆಲಸ ಮಾಡುವಾಗಲೇ ಹೃದಯಾಘಾತ; ಎಸ್‌ಡಿಎಂಸಿ ಅಧ್ಯಕ್ಷರ ಪತ್ನಿ ನವ್ಯ ನಿಧನ

ಪುತ್ತೂರು: ತೋಟದಲ್ಲಿ ಹುಲ್ಲು ಕತ್ತರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಹೃದಯಾಘಾತ ಸಂಭವಿಸಿ ದರ್ಬೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ (SDMC) ಅಧ್ಯಕ್ಷ ಶುಭಕರ ನಾಯಕ್‌ ಅವರ ಪತ್ನಿ ನವ್ಯ (38 ವರ್ಷ) ಅವರು ನಿಧನರಾಗಿದ್ದಾರೆ.

ಪುತ್ತೂರು ತಾಲೂಕಿನ ದರ್ಬೆತ್ತಡ್ಕ ನಿವಾಸಿಯಾದ ನವ್ಯ ಅವರು ಎಂದಿನಂತೆ ತಮ್ಮ ತೋಟದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಹುಲ್ಲು ಕತ್ತರಿಸುವ ಕೆಲಸ ಮಾಡುತ್ತಿದ್ದಾಗ ಅವರಿಗೆ ತೀವ್ರವಾದ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Advertisement

ಇದನ್ನೂ ಓದಿ: ಕಡಬದ ಯೂಟ್ಯೂಬರ್ ಸಂತೋಷ್ ಪೊಲೀಸ್ ಕಸ್ಟಡಿಗೆ: ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಆರೋಪ

ಮೃತ ನವ್ಯ ಅವರು ಸಮಾಜಮುಖಿ ಕಾರ್ಯಗಳಲ್ಲಿ ಗುರುತಿಸಿಕೊಂಡಿದ್ದ ಶುಭಕರ ನಾಯಕ್ ಅವರ ಪತ್ನಿಯಾಗಿದ್ದು, ಕುಟುಂಬಕ್ಕೆ ಆಧಾರಸ್ತಂಭವಾಗಿದ್ದರು. ಕಿರಿಯ ವಯಸ್ಸಿನಲ್ಲೇ ಹೃದಯಾಘಾತಕ್ಕೆ ತುತ್ತಾಗಿರುವುದು ಸ್ಥಳೀಯರಲ್ಲಿ ಮತ್ತು ಮೃತರ ಕುಟುಂಬಸ್ಥರಲ್ಲಿ ಭಾರಿ ಆಘಾತ ಮೂಡಿಸಿದೆ. ಮೃತರು ಪತಿ ಹಾಗೂ ಮೂವರು ಹೆಣ್ಣ ಮಕ್ಕಳನ್ನು ಅಗಲಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು