Breaking News

ನಿಧಿಗಾಗಿ ಮಗುವಿನ ಬಲಿಗೆ ಸಿದ್ಧತೆ! ಮಕ್ಕಳ ರಕ್ಷಣಾ ಘಟಕಾಧಿಕಾರಿಗಳ ಎಂಟ್ರಿ

Preparations for the sacrifice of a boy for the treasure raid by child protection officers

ಬೆಂಗಳೂರು: ನಿಧಿಯ ಆಸೆಗೆ ಬಿದ್ದ ಕೆಲವರು ಜೀವ ಬಲಿ ಕೊಡಲೂ ಹಿಂದೆ ಮುಂದೆ ನೋಡುವುದಿಲ್ಲ. ಇಂತಹ ಅನೇಕ ಪ್ರಕರಣಗಳು ಈ ಹಿಂದೆ ನಡೆದಿದೆ. ಇದೀಗ ಇಂತಹದ್ದೇ ಒಂದು ಪ್ರಕರಣದಲ್ಲಿ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಸಣ್ಣ ಮಗುವನ್ನು ರಕ್ಷಿಸಿದ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಿಧಿಯ ಆಸೆಗೆ ಬಿದ್ದ ವ್ಯಕ್ತಿಯೊಬ್ಬ ಒಂದು ವರ್ಷದ ಮಗುವನ್ನು ಬಲಿ ಕೊಡಲು ಸಿದ್ಧತೆ ನಡೆಸಿಕೊಂಡಿದ್ದ ಬಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ದಾಳಿ ನಡೆಸಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಇದನ್ನೂ ಓದಿ: ಮದುವೆಗೆ ನಿರಾಕರಿಸಿದ ‌ಹಿಂದೂ ಮಹಿಳೆಯ ಹತ್ಯೆ! ಆರೋಪಿ ರಫೀಕ್‌ ಆತ್ಮಹತ್ಯೆ

ಶನಿವಾರದಂದು ಸೈಯದ್ ಇಮ್ರಾನ್ ಎಂಬಾತನ ಮನೆಯೊಳಗೆ ಒಂದು ಗುಂಡಿ ತೋಡಿ, ಮಗುವಿನ ಬಲಿಗೂ ಮುನ್ನ ಅಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗುತ್ತಿತ್ತು. ಈ ವಿಚಾರ ತಿಳಿದ ಅಪರಿಚಿತ ವ್ಯಕ್ತಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಶಿಶುವನ್ನು ರಕ್ಷಿಸಿದ್ದಾರೆ.

ಮನೆಯೊಳಗೆ ತೋಡಿದ್ದ ಸಣ್ಣ ಗುಂಡಿಯ ಬಳಿ, ಧೂಪದ್ರವ್ಯ ಮತ್ತು ಹೂವುಗಳಂತಹ ಆಚರಣೆಗಳಿಗೆ ಬೇಕಾದ ವಸ್ತುಗಳು ಸಹ ಕಂಡುಬಂದಿವೆ. ಸದ್ಯ, ರಕ್ಷಣೆಗೊಳಪಟ್ಟ ಮಗುವನ್ನು ಮಕ್ಕಳ ಆರೈಕೆ ಕೇಂದ್ರದಲ್ಲಿರಿಸಿರುವ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

(ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ  ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com)

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು