ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಅರುಂಡಿ ಗ್ರಾಮದಲ್ಲಿ ನಡೆದಿದ್ದ ವೃದ್ಧೆ ಕಮಲಮ್ಮ (65) ಅವರ ನಿಗೂಢ ಕೊಲೆ ಪ್ರಕರಣಕ್ಕೆ ಕೊನೆಗೂ ಸುಖಾಂತ್ಯ ಸಿಕ್ಕಿದೆ. ತನ್ನ ಗೇಮಿಂಗ್ ಸಾಲ ತೀರಿಸಲು ಅಜ್ಜಿ ವಯಸ್ಸಿನ ವೃದ್ಧೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿ ಆಭರಣ ದೋಚಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅರುಂಡಿ ಗ್ರಾಮದ ನಿವಾಸಿ ಕಮಲಮ್ಮ ಮನೆಯಲ್ಲಿ ಒಂಟಿಯಾಗಿದ್ದನ್ನು ಗಮನಿಸಿದ ಆರೋಪಿ ಅಭೀಷೇಕ್ ಕೆ. (23), ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದನು. ನಂತರ ವೃದ್ಧೆಯ ಮೈಮೇಲಿದ್ದ ಬಂಗಾರದ ಆಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದನು.
ಆರೋಪಿ ಅಭಿಷೇಕ್ ಆನ್‌ಲೈನ್ ಗೇಮ್‌ಗಳಿಗೆ ದಾಸನಾಗಿದ್ದನು. ಇದರಲ್ಲಿ ಭಾರಿ ಹಣ ಕಳೆದುಕೊಂಡು ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದನು. ಈ ಸಾಲವನ್ನು ತೀರಿಸಲು ದಾರಿ ಕಾಣದೆ ಕೊಲೆ ಮತ್ತು ದರೋಡೆಯಂತಹ ದಾರಿ ಹಿಡಿದಿದ್ದನು. ನ್ಯಾಮತಿ ಪೊಲೀಸರು ತೀವ್ರ ತನಿಖೆ ನಡೆಸಿ ಆರೋಪಿ ಅಭಿಷೇಕ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯಿಂದ ಈ ಕೆಳಗಿನವುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ; ಬೆಳ್ತಂಗಡಿ: ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ನ್ಯಾಮತಿ ಪೊಲೀಸರು ಈ ಹಳೆಯ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆನ್‌ಲೈನ್ ಗೇಮಿಂಗ್ ಎಂಬ ಹೆಮ್ಮಾರಿ ಯುವಕರನ್ನು ಹೇಗೆ ಅಪರಾಧ ಲೋಕಕ್ಕೆ ತಳ್ಳುತ್ತಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

