ಭಾರತೀಯರಿಗೆ ಇರಾನ್ ತೊರೆಯಲು ಸೂಚನೆ

ಇರಾನ್: ಇರಾನ್ ಸೇರಿದಂತೆ ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಇರಾನ್‌ನಲ್ಲಿರುವ ಭಾರತೀಯರು ಕೂಡಲೇ ದೇಶ ತೊರೆಯುವಂತೆ ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ.

ಇರಾನ್‌ನಲ್ಲಿರುವ ಎಲ್ಲಾ ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರು,  ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಯಾವುದೇ ಸಾರಿಗೆ ವ್ಯವಸ್ಥೆ ಬಳಸಿಕೊಂಡು ಕೂಡಲೇ ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟದ್ದು: ಸತೀಶ್ ಜಾರಕಿಹೊಳಿ

ಇರಾನ್‌ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರ ಜ.5 ರಂದು ಹೊರಡಿಸಿದ್ದ ಸಲಹೆಯ ಮುಂದುವರಿದ ಭಾಗವಾಗಿ ಸೂಚನೆ ಹೊರಡಿಸಿದೆ. ಎಲ್ಲಾ ಭಾರತೀಯರು ಹಾಗೂ ಭಾರತೀಯ ಮೂಲದವರು ಎಚ್ಚರಿಕೆ ವಹಿಸಬೇಕು. ಪ್ರತಿಭಟನೆಗಳು ನಡೆಯುವ ಸ್ಥಳಗಳಿಂದ ದೂರವಿರಬೇಕು, ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಬೇಕೆಂದು ಸೂಚಿಸಿದೆ.

ಅಲ್ಲದೇ ಬೆಳವಣಿಗೆ ತಿಳಿಯಲು ಸ್ಥಳೀಯ ಮಾಧ್ಯಮಗಳ ಮೇಲೆ ಗಮನ ಹರಿಸಿ. ಯಾವುದೇ ಕ್ಷಣದಲ್ಲೂ ನಿಮ್ಮ ಪಾಸ್‌ಪೋರ್ಟ್‌, ಇತರ ಪ್ರಯಾಣ ದಾಖಲೆಗಳನ್ನ ಸಿದ್ಧವಾಗಿಟ್ಟುಕೊಳ್ಳಿ. ಒಂದು ವೇಳೆ ರಾಯಭಾರ ಕಚೇರಿಯಲ್ಲಿ ನೋಂದಾಯಿಸದವರು ಆನ್‌ಲೈನ್‌ ಪೋರ್ಟಲ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದೆ.

ತುರ್ತು ಸಹಾಯವಾಣಿ ಬಿಡುಗಡೆ
ಇನ್ನೂ ಇರಾನ್‌ನಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ ಕೆಲವು ಪ್ರದೇಶಗಳಲ್ಲಿ ಇಂಟರ್ನೆಟ್‌ ಸಂಪರ್ಕಗಳನ್ನ ಸ್ಥಗಿತಗೊಳಿಸಲಾಗಿದೆ. ಅಂತಹ ಪ್ರದೇಶಗಳಲ್ಲಿ ಭಾರತೀಯರು ಸಿಲುಕಿಕೊಂಡಿದ್ದರೆ, ಅವರ ಪರವಾಗಿ ಭಾರತದ ಕುಟುಂಬಗಳು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ. ಅದಕ್ಕಾಗಿ ತುರ್ತು ಸಹಾಯವಾಣಿ ಸಂಖ್ಯೆಯನ್ನ ಬಿಡುಗಡೆಗೊಳಿಸಲಾಗಿದೆ.

ತುರ್ತು ಸಂಪರ್ಕ ಸಹಾಯವಾಣಿ ಸಂಖ್ಯೆ
 +989128109115, +989128109109, +989128109102, +989932179359
 ಇ-ಮೇಲ್: cons.tehran@mea.gov.in

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು