ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ಜಂಪೇನಹಳ್ಳಿ ಕೆರೆ ಬಳಿ ಆಟೋ ಚಾಲಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕೋತಿಯೊಂದು ಅಡ್ಡ ಬಂದ ಕಾರಣ ಆಟೋ ಚಾಲಕ ದಿಢೀರ್ ಬ್ರೇಕ್ ಹಾಕಿದ್ದಾನೆ. ಇದರಿಂದ ಆಟೋ ಪಲ್ಟಿಯಾಗಿದೆ. ನಂತರ ಪಲ್ಟಿಯಾದ ಆಟೋಗೆ ಕಾರು ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಆಟೋ ಚಾಲಕ ಸಾವನ್ನಪ್ಪಿದ್ದಾನೆ.
ಮೈಸೂರಿನಲ್ಲಿ ರಸ್ತೆಯಲ್ಲಿ ದಿಢೀರನೆ ಕೋತಿ ಅಡ್ಡ ಬಂದ ಕಾರಣ ಆಟೋ ಚಾಲಕ ಮಹೇಂದ್ರ ಕುಮಾರ್ ಬ್ರೇಕ್ ಹಾಕಿದಾಗ ಆಟೋ ಪಲ್ಟಿಯಾಗಿದೆ. ಈ ವೇಳೆ ಎದುರುಗಡೆಯಿಂದ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮಹೇಂದ್ರ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಮಂಗಳೂರು ಜನರೇ ಎಚ್ಚರ, ನಗರದೊಳಗೆ ಬಂದಿದೆ ಚಿರತೆ: ಅರಣ್ಯ ಇಲಾಖೆ ಅಲರ್ಟ್
ಈ ಕುರಿತು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

