ಕರ್ತವ್ಯ ನಿರ್ಲಕ್ಷ್ಯ: ಪುತ್ತೂರು ಸರಕಾರಿ ಪ್ರ.ದ. ಕಾಲೇಜು ಪ್ರಾಂಶುಪಾಲೆ ಅಮಾನತು

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರನ್ನು ಪ್ರಚೋದಿಸಿ, ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಏಕಾಏಕಾ ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಪುತ್ತೂರು ಮಹಿಳಾ ಕಾಲೇಜು ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತ್ತು ಮಾಡಲಾಗಿದೆ.

16-02-2026ರಂದು ಬೆಳಿಗ್ಗೆ ಸುಮಾರು 9:30ಕ್ಕೆ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಪುತ್ತೂರು ಇಲ್ಲಿನ ವಿದ್ಯಾರ್ಥಿಗಳು ಸಾರ್ವಜನಿಕ ಸ್ಥಳದಲ್ಲಿ ರಸ್ತೆ ತಡೆಯನ್ನು ಯಾವುದೇ ಪೂರ್ವಾನುಮತಿ ಪಡೆಯದೆ ನಡೆಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ.

Advertisement

ಇದನ್ನೂ ಓದಿ: ಕೋತಿ ಅಡ್ಡ ಬಂದು ಆಟೋ ಪಲ್ಟಿ, ಕಾರು ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

ಪ್ರತಿಭಟನೆಯ ಸಂದರ್ಭದಲ್ಲಿ ಪ್ರಾಂಶುಪಾಲರಾದ ವೇದಶ್ರೀ ನಿಡ್ಯಾ ಮತ್ತು ಪ್ರಾಧ್ಯಾಪಕರಾದ ಐವನ್ ಪ್ರಾನ್ಸಿಸ್ ಲೋಬೋ ಉಪಸ್ಥಿತರಿದ್ದು ಮತ್ತು ಈ ಪ್ರತಿಭಟನೆಗೆ ಪ್ರೇರೇಪಿಸಿರುವ ಬಗ್ಗೆ ಪೊಲೀಸ್ ಇಲಾಖೆಗೆ ಗುಪ್ತ ಮಾಹಿತಿ ಬಂದಿದೆ.

Advertisement

ಕಾಲೇಜಿನ ವಿದ್ಯಾರ್ಥಿನಿಯರು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಿರುವ ಬಗ್ಗೆ ಪತ್ರಿಕೆ/ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗಿದ್ದು, ಈ ರೀತಿ ವಿದ್ಯಾರ್ಥಿನಿಯರು ಪ್ರತಿಭಟಿಸುವ ಸಂದರ್ಭದಲ್ಲಿ ಯಾವುದೇ ಅನಾಹುತಗಳು ನಡೆದರೆ ಅಥವಾ ಕಾನೂನಾತ್ಮಕ ಕ್ರಮಗಳು ಜಾರಿಯಾದಲ್ಲಿ ವಿದ್ಯಾರ್ಥಿನಿಯರ ಜವಾಬ್ದಾರಿ ಸಂಪೂರ್ಣವಾಗಿ ಪ್ರಾಂಶುಪಾಲರು ಮತ್ತು ಕಾಲೇಜಿನ ಸಿಬ್ಬಂದಿಗಳಾಗಿರುತ್ತದೆ.

ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳ ಬಗ್ಗೆ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಅಥವಾ ಉಪನ್ಯಾಸಕರಿಗೆ ಮನವಿಯನ್ನು ಸಲ್ಲಿಸಲು ಅವಕಾಶವಿದ್ದು, ಆದರೆ, ಸದರಿ ಸಮಸ್ಯೆಗಳ ಬಗ್ಗೆ ತರಗತಿ ಪ್ರಾರಂಭಗೊಂಡ ನಂತರವೂ ಇಂತಹ ಯಾವುದೇ ಮಾಹಿತಿ ನೀಡಿರುವ ಬಗ್ಗೆ ದಾಖಲೆ ಇರುವುದಿಲ್ಲ.

ಶಾಸಕರಿಗೆ ಅಥವಾ ಸಂಭಂದಿಸಿದ ಇಲಾಖೆಗೆ ಸೂಕ್ತ ಮಾಹಿತಿ ನೀಡದೆ ಈ ರೀತಿ ನಡೆದುಕೊಂಡ ಹಿನ್ನಲೆ ಪ್ರಾಂಶುಪಾಲರ ವಿರುದ್ಧ ಕ್ರಮ ಜರುಗಿಸಲಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು