ಐಪಿಎಲ್ : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರ ಖಂಡಿಸಿ ಬಾಂಗ್ಲಾದೇಶದ ಆಟಗಾರ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ ಕೈಬಿಟ್ಟ ನಡುವೆ ಬಾಂಗ್ಲಾ ಮಧ್ಯಂತರ ಸರ್ಕಾರ ಐಪಿಎಲ್ ಪ್ರಸಾರವನ್ನು ಅನಿರ್ದಿಷ್ಟಾವಧಿವರೆಗೆ ನಿಷೇಧಿಸಿದೆ.
ಕಳೆದ ಡಿಸೆಂಬರ್‌ನಲ್ಲಿ ಅಬುಧಾಬಿಯಲ್ಲಿ ನಡೆದ ಐಪಿಎಲ್ ೨೦೨೬ ಮಿನಿ ಹರಾಜಿನಲ್ಲಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ೯.೨೦ ಕೋಟಿ ರೂ.ಗೆ ಖರೀದಿಸಲಾಗಿತ್ತು. ಶನಿವಾರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು, ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆ ಮುಸ್ತಾಫಿಜುರ್ ಅವರನ್ನು ತಂಡದಿಂದ ಕೈಬಿಡುವಂತೆ ಮಂಡಳಿಯು ಕೆಕೆಆರ್ ಫ್ರಾಂಚೈಸಿಯನ್ನು ಕೇಳಿಕೊಂಡಿತ್ತು ಎಂದು ತಿಳಿಸಿದರು.

ಇದನ್ನೂ ಓದಿ : Cricket : ಭಾರತ–ಬಾಂಗ್ಲಾದೇಶ ವೈಟ್‌ಬಾಲ್ ಸರಣಿ 2026: ಬಿಸಿಬಿಸಿ ಪ್ರಕಟಣೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಮಾರ್ಚ್ ೨೬ ರಿಂದ ನಡೆಸಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಪಂದ್ಯಾವಳಿಯಲ್ಲಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಕೈಬಿಟ್ಟಿದೆ. ಇದಕ್ಕೆ ಸ್ಪಷ್ಟ ಕಾರಣವನ್ನು ನೀಡಿಲ್ಲ. ಈ ನಿರ್ಧಾರವು ಬಾಂಗ್ಲಾದ ಜನರಿಗೆ ಬೇಸರ ತರಿಸಿದೆ. ಮುಂದಿನ ಸೂಚನೆ ಬರುವವರೆಗೆ ಎಲ್ಲಾ ಐಪಿಎಲ್ ಪಂದ್ಯಗಳು ಮತ್ತು ಕಾರ್ಯಕ್ರಮಗಳ ಪ್ರಸಾರವನ್ನು ನಿಲ್ಲಿಸಬೇಕು ಎಂದು ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ.
ವಾಟ್ಸಪ್: 7353833811, ಇ-ಮೇಲ್- g1newsdpt@gmail.com

