ನವದೆಹಲಿ: ಕಳೆದ ಕೆಲವು ಸಮಯದಿಂದ ಜೈಲು ವಾಸ ಅನುಭವಿಸುತ್ತಿದ್ದ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡುವ ಮೂಲಕ ನಿರಾಳತೆ ನೀಡಿದೆ. ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಎದುರಿಸುತ್ತಿರುವ ಕುಲಕರ್ಣಿ ಅವರು ಸದ್ಯದಲ್ಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಸುಪ್ರೀಂ ಕೋರ್ಟ್ ಪೀಠವು ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ್ದು, ಷರತ್ತುಬದ್ಧ ಜಾಮೀನು ನೀಡಿದೆ.
ಮುಂದಿನ 2 ತಿಂಗಳೊಳಗೆ ಪ್ರಕರಣದ ವಿಚಾರಣೆಯನ್ನು (Trial) ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಮತ್ತು ತನಿಖೆಗೆ ಸಹಕರಿಸಬೇಕು ಎಂಬ ಕಟ್ಟುನಿಟ್ಟಿನ ಸೂಚನೆಯನ್ನು ನೀಡಲಾಗಿದೆ. 2016ರಲ್ಲಿ ಧಾರವಾಡದ ಜಿಮ್‌ನಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ತಟ್ಟಿದ ಪ್ರತಿಭಟನೆ ಬಿಸಿ: ಸುಳ್ಳು ಹೇಳಿ ಬಿಜೆಪಿ ಕೈಗೆ ಅಸ್ತ್ರವಾದ್ರಾ ಸಿಎಂ ಸಿದ್ದರಾಮಯ್ಯ?
ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 15ನೇ ಆರೋಪಿಯಾಗಿದ್ದರು. 2021ರಲ್ಲಿ ಅವರಿಗೆ ಜಾಮೀನು ಸಿಕ್ಕಿತ್ತಾದರೂ, ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ 2025ರ ಜೂನ್‌ನಲ್ಲಿ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಗೊಳಿಸಿತ್ತು. ನಂತರ ಅವರು ಮತ್ತೆ ಜೈಲು ಪಾಲಾಗಿದ್ದರು. ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ಕೂಡ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ, ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸೂಚಿಸಿತ್ತು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

