ನಾಪೋಕ್ಲು: ನಾಪೋಕ್ಲು ಸಮೀಪದ ಬಲ್ಲಮಾವಟಿಯಲ್ಲಿ ಶನಿವಾರ ನಡೆಯಲಿರುವ ಹಿಂದು ಸಂಗಮ ಹಿನ್ನೆಲೆಯಲ್ಲಿ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡುವ ಸಂದರ್ಭ, ಸಿದ್ದೀಕ್ ಹಾಗೂ ಅವರ ಸಂಗಡಿಗರು ಅಪ್ಪಚ್ಚಿರ ಗೌತಮ್ ಎಂಬವರ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ ಪರಿಣಾಮ, ಗಾಯಾಳುವನ್ನು ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಕೊಡಗು: ಹಿಂದು ಕಾರ್ಯಕರ್ತನ ಮೇಲೆ ಹಲ್ಲೆ, ಬಿಜೆಪಿಯಿಂದ ಖಂಡನೆ

ಹಲ್ಲೆ ಆರೋಪಿಯನ್ನು ಬಂಧಿಸುವಂತೆ ಹಿಂದೂ ಸಂಘಟನೆಗಳಿಂದ ಶುಕ್ರವಾರ ಸಂಜೆ ನಾಪೋಕ್ಲುವಿನಲ್ಲಿ ರಸ್ತೆ ತಡೆ ನಡೆಸಿದರು. ಈ ಸಂದರ್ಭ ಪೊಲೀಸ್ ಅಧಿಕಾರಿಗಳು ಹಾಗು ಪ್ರತಿಭಟನೆಕಾರರ ನಡುವೆ ಮಾತಿನ ಚಿಕ್ಕಮಕಿ ಕೂಡ ನಡೆಯಿತು.
ನಾಪೋಕ್ಲುವಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸ್ಥಳದಲ್ಲಿ ವಿರಾಜಪೇಟೆ ಡಿವೈಎಸ್ಪಿ, ವಿರಾಜಪೇಟೆ ವೃತ್ತ ನಿರೀಕ್ಷಕರು ಸಿಬ್ಬಂದಿಗಳು, ಮಡಿಕೇರಿ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದು, ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಜಿಲ್ಲೆಯ ಹಿರಿಯ ಪೋಲಿಸ್ ಅಧಿಕಾರಿಗಳು ಪ್ರತಿಭಟನ ಸ್ಥಳಕ್ಕೆ ಆಗಮಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಹಿಂದೂ ಸಂಘಟನೆಯ ಮನು ಮುತ್ತಪ್ಪ ಮತ್ತು ಸಂಗಡಿಗರು ಈ ಘಟನೆಯನ್ನು ಖಂಡಿಸಿ ತಪ್ಪಿತಸ್ಥರು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

