ನವದೆಹಲಿ: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದ ಜಂಟಿ ವಾಯುದಾಳಿಯ ಬೆನ್ನಲ್ಲೇ, ಅಲ್ಲಿರುವ ಲಕ್ಷಾಂತರ ಭಾರತೀಯರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಭಾರತೀಯ ರಾಯಭಾರ ಕಚೇರಿಗಳು (Indian Embassies) ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿವೆ. ಇರಾನ್ ಮತ್ತು ಇಸ್ರೇಲ್‌ನಲ್ಲಿರುವ ಭಾರತೀಯರು ಅನಗತ್ಯವಾಗಿ ಮನೆಯಿಂದ ಅಥವಾ ಕೆಲಸದ ಸ್ಥಳದಿಂದ ಹೊರಬರದಂತೆ ಸೂಚಿಸಲಾಗಿದೆ. ಬಾಂಬ್ ಅಥವಾ ಕ್ಷಿಪಣಿ ದಾಳಿಯ ಮುನ್ಸೂಚನೆ ಸಿಕ್ಕ ಕೂಡಲೇ ಸಮೀಪದ ಸುರಕ್ಷಿತ ಆಶ್ರಯ ತಾಣಗಳಿಗೆ (Safe Shelters) ತೆರಳಲು ತಿಳಿಸಲಾಗಿದೆ.
ಯಾವುದೇ ಕಾರಣಕ್ಕೂ ಹೊರಗೆ ಪ್ರಯಾಣಿಸಬೇಡಿ. ಸದ್ಯಕ್ಕೆ ವಿಮಾನ ನಿಲ್ದಾಣಗಳು ಮತ್ತು ಪ್ರಮುಖ ರಸ್ತೆ ಮಾರ್ಗಗಳು ಮುಚ್ಚಲ್ಪಟ್ಟಿವೆ. ಸ್ಥಳೀಯ ಮಾಧ್ಯಮಗಳು ಮತ್ತು ರಾಯಭಾರ ಕಚೇರಿಯ ಅಧಿಕೃತ ‘X’ (ಟ್ವಿಟರ್) ಖಾತೆಗಳನ್ನು ಗಮನಿಸುತ್ತಿರಲು ವಿನಂತಿಸಲಾಗಿದೆ. ಯುದ್ಧದ ಹಿನ್ನೆಲೆಯಲ್ಲಿ ಇರಾನ್, ಇಸ್ರೇಲ್, ಇರಾಕ್ ಮತ್ತು ಕತಾರ್ ತನ್ನ ಆಕಾಶ ಮಾರ್ಗವನ್ನು (Airspace) ಮುಚ್ಚಿವೆ. ಇದರಿಂದಾಗಿ ಏರ್ ಇಂಡಿಯಾ, ಇಂಡಿಗೋ ಮತ್ತು ಕತಾರ್ ಏರ್ವೇಸ್ ಸೇರಿದಂತೆ ಪ್ರಮುಖ ವಿಮಾನಗಳ ಸಂಚಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ.

ಇದನ್ನೂ ಓದಿ: ಇರಾನ್ ಮೇಲೆ ಇಸ್ರೇಲ್ ಅಮೆರಿಕ ಜಂಟಿ ದಾಳಿ
ತುರ್ತು ಸಹಾಯವಾಣಿ ಸಂಖ್ಯೆಗಳು (24×7 Helpline):

ಯಾವುದೇ ತುರ್ತು ಸಂದರ್ಭದಲ್ಲಿ ಭಾರತೀಯರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು:
ಇರಾನ್ (ಟೆಹ್ರಾನ್): +989128109115, +989128109109
ಕತಾರ್ (ದೋಹಾ): 00974-55647502
ಇಸ್ರೇಲ್ (ಟೆಲ್ ಅವೀವ್): +972-54-7520711
ಜೋರ್ಡಾನ್: 00962-770 422 276
ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

