Breaking News

ಬಂಟ್ವಾಳ: ಅಕ್ರಮ ಗೋ ಸಾಗಾಟದ ವಾಹನ ಜಪ್ತಿ, ಆರೋಪಿಗಳ ಬಂಧನ

Wife kills husband by cutting off his penis! Son also joins in the crime in Kittur Belagavi

ಬಂಟ್ವಾಳ: ವಧಾಗಾರಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ಬಂಟ್ವಾಳ ಪೊಲೀಸರು ಬೇಧಿಸಿದ್ದಾರೆ. ತಾಲೂಕಿನ ಕೊಳ್ಳಾಡು ಗ್ರಾಮದ ಕರೈ ಪ್ರದೇಶದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಖಚಿತ ಮಾಹಿತಿಯ ಆಧಾರದಲ್ಲಿ ಫೆಬ್ರವರಿ 26ರ ರಾತ್ರಿ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ನೇತೃತ್ವದ ತಂಡ ಸ್ಥಳಕ್ಕೆ ದೌಡಾಯಿಸಿತು.

Advertisement

ಇದನ್ನೂ ಓದಿ: T20 Worldcup: ಪಂದ್ಯ ಗೆದ್ದರೂ ಕೂಡ ವಿಶ್ವಕಪ್ ಇಂದ ಹೊರಬಿದ್ದ ಪಾಕಿಸ್ತಾ‌ನ

ರಸ್ತೆ ಬದಿಯಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ವಾಹನವನ್ನು ಪರಿಶೀಲಿಸಿದಾಗ, ಅದರೊಳಗೆ ಎರಡು ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಪತ್ತೆಯಾಯಿತು.

ವಾಹನದಲ್ಲಿದ್ದ ಮಂಡ್ಯ ಜಿಲ್ಲೆಯ ನಿವಾಸಿಗಳಾದ ನವೀನ್ ಮತ್ತು ಚೇತನ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದರು. ಪ್ರಾಥಮಿಕ ತನಿಖೆಯಲ್ಲಿ, ಚನ್ನರಾಯಪಟ್ಟಣದ ಶಂಕರ್ ಎಂಬವರು ಬಂಟ್ವಾಳ ತಾಲೂಕಿನ ಸಾಲೆತ್ತೂರಿನ ಶಾಫಿ ಎಂಬವರಿಗೆ ಜಾನುವಾರುಗಳನ್ನು ಕಳುಹಿಸಿರುವುದು ತಿಳಿದುಬಂದಿದೆ.

ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶವಿರುವ ಸಾಧ್ಯತೆ ಕುರಿತು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಇನ್ನೂ ಹೆಚ್ಚಿನ ತನಿಖೆಯಲ್ಲಿ, ಜಾನುವಾರು ಸಾಗಾಟಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬೇರೆಯವರ ಹೆಸರಿನಲ್ಲಿ ಪಡೆದು ಬಳಸಿರುವ ವಿಚಾರವೂ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.ಪೊಲೀಸರು ವಾಹನವನ್ನು ವಶಕ್ಕೆ ಪಡೆದು ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು