Breaking News

ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್: ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಡ್ರೋನ್ ಪ್ರತಾಪ್ ಪರದಾಟ!

ಅಬುಧಾಬಿ: ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ತಾರಕಕ್ಕೇರಿರುವ ಬೆನ್ನಲ್ಲೇ, ಅಂತರಾಷ್ಟ್ರೀಯ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಇದೇ ಕಾರಣದಿಂದ ಕನ್ನಡದ ಬಿಗ್ ಬಾಸ್ ಮಾಜಿ ಸ್ಪರ್ಧಿ ಮತ್ತು ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಡ್ರೋನ್ ಪ್ರತಾಪ್ (Drone Prathap) ಅವರು ಅಬುಧಾಬಿ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ. “ನಾನು ಪ್ರಸ್ತುತ ಅಬುಧಾಬಿ ಏರ್‌ಪೋರ್ಟ್‌ನಲ್ಲಿದ್ದೇನೆ. ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ನಾನು ಬರಬೇಕಿದ್ದ ಎತಿಹಾದ್ (Etihad) ವಿಮಾನ ಸೇರಿದಂತೆ ಮುಂದಿನ 12 ಗಂಟೆಗಳ ಕಾಲ ಎಲ್ಲಾ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಸಾವಿರಾರು ಭಾರತೀಯರು ಸಿಲುಕಿಕೊಂಡಿದ್ದು, ಸರಿಯಾದ ಮಾಹಿತಿ ಸಿಗದೆ ಪರದಾಡುತ್ತಿದ್ದಾರೆ. ಯುದ್ಧದ ಭೀತಿಯಿಂದಾಗಿ ಇಡೀ ಏರ್‌ಪೋರ್ಟ್‌ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಎಂದು ಪ್ರತಾಪ್ ಹೇಳಿದ್ದಾರೆ.ತಡರಾತ್ರಿಯೇ ಬೆಂಗಳೂರಿಗೆ ಮರಳಬೇಕಿದ್ದ ಪ್ರತಾಪ್, ವಿಮಾನ ರದ್ದಾದ ಕಾರಣ ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲೇ ಕಾಲ ಕಳೆಯಬೇಕಾದ ಪರಿಸ್ಥಿತಿ ಬಂದಿದೆ.

Advertisement

ಇದನ್ನೂ ಓದಿ: ರಾಕಿ ಭಾಯ್ ಫ್ಯಾನ್ಸ್‌ಗೆ ಬಿಗ್ ಅಪ್‌ಡೇಟ್: ಮಾ. 2ಕ್ಕೆ ‘ಟಾಕ್ಸಿಕ್’ ಸಿನಿಮಾದ ಮೊದಲ ಹಾಡು ‘ತಬಾಹಿ’ ಬಿಡುಗಡೆ!

ಇಲ್ಲಿದೆ ನೋಡಿ ವಿಡಿಯೋ:

 

View this post on Instagram

 

A post shared by Prathap N M (@droneprathap)

ಕೇವಲ ಪ್ರತಾಪ್ ಮಾತ್ರವಲ್ಲದೆ, ದುಬೈ, ಶಾರ್ಜಾ ಮತ್ತು ಅಬುಧಾಬಿಯಲ್ಲಿ 150ಕ್ಕೂ ಹೆಚ್ಚು ಕನ್ನಡಿಗರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಎಂಎಲ್‌ಸಿ ಭೋಜೇಗೌಡ ಅವರು ಕೂಡ ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ. ಇರಾನ್ ವಾಯುಪ್ರದೇಶವನ್ನು ಮುಚ್ಚಿರುವುದು ಮತ್ತು ವಿಮಾನ ನಿಲ್ದಾಣಗಳ ಮೇಲೆ ಕ್ಷಿಪಣಿ ದಾಳಿಯ ಭೀತಿಯೇ ಈ ವಿಳಂಬಕ್ಕೆ ಕಾರಣವಾಗಿದೆ.

ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು