Breaking News

Sullia : ಪುಟ್ಟ ಮಗುವನ್ನು ಸೊಂಟಕ್ಕೆ ಕಟ್ಟಿ ಮಹಿಳೆ ಆತ್ಮಹತ್ಯೆ!

ಸುಳ್ಯ:  ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎನ್ನುವವರ  ಪತ್ನಿ ಮಧುಶ್ರೀ (34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು. ಹರೀಶ್ ಅವರು ತಂದೆ, ತಾಯಿ, ಪತ್ನಿ, ಮಗುವಿನೊಂದಿಗೆ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮಲಗಿದ್ದ ತಾಯಿ, ಮಗು ಭಾನುವಾರ ಬೆಳಗ್ಗೆ ಕಾಣೆಯಾಗಿದ್ದಾರೆ.  ಹುಡುಕಾಡಿದಾಗ ಮನೆ ಸಮೀಪದ ಇನ್ನೊಬ್ಬರ ಜಾಗದ ಕೆರೆಯಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದ್ದು, ಮಧುಶ್ರೀ ಮಗುವನ್ನು ಬಟ್ಟೆಯಲ್ಲಿ ತನ್ನ ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Advertisement

ಇದನ್ನೂ ಓದಿ: ನಿಧಿಗಾಗಿ ಮಗುವಿನ ಬಲಿಗೆ ಸಿದ್ಧತೆ! ಮಕ್ಕಳ ರಕ್ಷಣಾ ಘಟಕಾಧಿಕಾರಿಗಳ ಎಂಟ್ರಿ

ಪುತ್ತೂರು ಬೆಟಗೇರಿಯವರಾದ ಮಧುಶ್ರೀ ಅವರು ನಾಲ್ಕು ವರ್ಷದ ಹಿಂದೆ ಹರೀಶ್ ಅವರನ್ನು ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಳ್ಳಾರೆ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ.
ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು