Breaking News

Today Horoscope 3: ಇಂದು ಯಾವ ರಾಶಿಯವರಿಗೆ ಆಂಜನೇಯನ ಅನುಗ್ರಹ ಸಿಗಲಿದೆ? ಇಲ್ಲಿದೆ ಇಂದಿನ ಫಲ!

ಬೆಂಗಳೂರು: ಇಂದು ಶುಭಕೃತ ನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದ ಶುಕ್ಲ ಪಕ್ಷದ ಚತುರ್ದಶಿ ತಿಥಿ. ಮಂಗಳವಾರದ ಈ ದಿನ ಆಂಜನೇಯ ಸ್ವಾಮಿಯ ಆರಾಧನೆಗೆ ವಿಶೇಷವಾಗಿದೆ. ದ್ವಾದಶ ರಾಶಿಗಳ ಇಂದಿನ ಫಲ ಹೇಗಿದೆ ಎಂದು ನೋಡೋಣ.

ಮೇಷ: ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ಸಿಗಲಿವೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಹಣಕಾಸಿನ ಹರಿವು ಸಾಧಾರಣವಾಗಿರಲಿದೆ.

Advertisement

ವೃಷಭ: ಹಳೆಯ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷ. ಭೂಮಿ ಅಥವಾ ವಾಹನ ಖರೀದಿಯ ಯೋಗವಿದೆ. ಕುಟುಂಬದಲ್ಲಿ ಸುಖ ಶಾಂತಿ ಇರಲಿದೆ.

ಮಿಥುನ: ವ್ಯಾಪಾರಸ್ಥರಿಗೆ ಇಂದು ಲಾಭದಾಯಕ ದಿನ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚಲಿದೆ.

ಕರ್ಕಾಟಕ: ದೂರದ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ.

ಸಿಂಹ: ಇಂದು ಆತ್ಮವಿಶ್ವಾಸದಿಂದ ಕಾರ್ಯನಿರ್ವಹಿಸಿ. ಸಮಾಜದಲ್ಲಿ ಗೌರವ ಹೆಚ್ಚಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.

ಕನ್ಯಾ: ಕೆಲಸದಲ್ಲಿ ಅಡೆತಡೆಗಳು ಎದುರಾಗಬಹುದು, ಧೈರ್ಯಗೆಡಬೇಡಿ. ಹಿರಿಯರ ಸಲಹೆ ಪಡೆದು ಮುನ್ನಡೆಯಿರಿ. ಕೋಪದ ಮೇಲೆ ನಿಯಂತ್ರಣವಿರಲಿ.

ತುಲಾ: ಶುಭ ಕಾರ್ಯಗಳಲ್ಲಿ ಭಾಗವಹಿಸುವಿರಿ. ಪ್ರೇಮ ಜೀವನದಲ್ಲಿ ಮಧುರತೆ ಇರಲಿದೆ. ಕಚೇರಿಯಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ.

ವೃಶ್ಚಿಕ: ಇಂದು ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಸಂಜೆ ವೇಳೆಗೆ ಶುಭ ಸುದ್ದಿ ಕೇಳುವಿರಿ. ಸಾಲದ ಹೊರೆ ಕಡಿಮೆಯಾಗುವ ಮುನ್ಸೂಚನೆ ಇದೆ.

ಧನು: ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದೆ. ಮಕ್ಕಳಿಂದ ಸಂತೋಷದ ಸುದ್ದಿ ಸಿಗಲಿದೆ. ಹೊಸ ಹೂಡಿಕೆಗೆ ಇಂದು ಉತ್ತಮ ದಿನ.

ಮಕರ: ಕುಟುಂಬದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಮೂಡಬಹುದು. ತಾಳ್ಮೆಯಿಂದ ವರ್ತಿಸಿ. ಆರೋಗ್ಯದ ಕಡೆ ಗಮನಹರಿಸಿ.

ಕುಂಭ: ಸೃಜನಾತ್ಮಕ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಹಳೆಯ ಬಾಕಿ ವಸೂಲಿಯಾಗಲಿದೆ. ದಾಂಪತ್ಯ ಜೀವನ ಸುಖಮಯವಾಗಿರಲಿದೆ.

ಮೀನ: ಇಂದು ನಿಮಗೆ ಅದೃಷ್ಟದ ದಿನ. ಹಮ್ಮಿಕೊಂಡ ಕೆಲಸಗಳು ಯಶಸ್ವಿಯಾಗಲಿವೆ. ಆರ್ಥಿಕ ಲಾಭದ ಸಾಧ್ಯತೆ ಹೆಚ್ಚಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು