ತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತು ಮಹತ್ವದ ನಿರ್ಧಾರ ಕೈಗೊಂಡಿರುವ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ), ಗರ್ಭಧಾರಣೆಯ ವಯಸ್ಸಿನ ಮಹಿಳೆಯರಿಗೆ ದೇವಾಲಯ ಪ್ರವೇಶ ನೀಡುವುದಿಲ್ಲ ಎಂದು ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿದ ಟಿಡಿಬಿ ಅಧ್ಯಕ್ಷ ಕೆ. ಜಯಕುಮಾರ್ ಅವರು, 2018ರಲ್ಲಿ ಭಾರತದ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ವಿರೋಧಿಸಿ ಮಂಡಳಿಯು ನಿರ್ಣಯ ಕೈಗೊಂಡಿದೆ ಎಂದು ಹೇಳಿದರು. ಆ ತೀರ್ಪಿನ ಪ್ರಕಾರ ಮಹಿಳೆಯರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಲಾಗಿತ್ತು.

ಇದನ್ನೂ ಓದಿ: ಭೂಮಿಯಿಂದ ದೂರ ಸರಿಯುತ್ತಿದ್ದಾನೆ ಚಂದ್ರ: ಇನ್ನು ಮುಂದೆ ದಿನಕ್ಕೆ 24 ಅಲ್ಲ, 25 ಗಂಟೆ!
“ಶಬರಿಮಲೆ ಪದ್ಧತಿ, ಸಂಪ್ರದಾಯ ಹಾಗೂ ನಂಬಿಕೆಗಳನ್ನು ಕಾಪಾಡುವುದು ಟಿಡಿಬಿಯ ಮುಖ್ಯ ಉದ್ದೇಶವಾಗಿದೆ. 10ರಿಂದ 50 ವರ್ಷದೊಳಗಿನ ಮಹಿಳೆಯರು ದೇವಾಲಯ ಪ್ರವೇಶಿಸುವುದನ್ನು ನಿಷೇಧಿಸುವ ಕ್ರಮವನ್ನು ಮುಂದುವರಿಸಲು ನಿರ್ಧರಿಸಿದ್ದೇವೆ. ಈ ನಿಲುವನ್ನು ಸುಪ್ರೀಂ ಕೋರ್ಟ್ ಮುಂದೆ ಕೂಡ ಮಂಡಿಸಲಾಗುವುದು,” ಎಂದು ಅವರು ತಿಳಿಸಿದರು.
ಆಧ್ಯಾತ್ಮಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

