ಪುತ್ತೂರು: ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ರಾಜ್ಯದ ಎಲ್ಲಾ ಭೂ ಹಿಡುವಳಿದಾರರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಕೃಷಿ ಇಲಾಖೆ ಸೂಚಿಸಿದೆ.
ಕೇಂದ್ರ ಯೋಜನೆಗಳ ಪ್ರಯೋಜನಗಳನ್ನು ಸುಗಮವಾಗಿ ಮತ್ತು ಪಾರದರ್ಶಕವಾಗಿ ರೈತರಿಗೆ ತಲುಪಿಸಲು ಇ-ಕೆವೈಸಿ ಪ್ರಕ್ರಿಯೆ ಅನಿವಾರ್ಯವಾಗಿದ್ದು, ಸಂಬಂಧಿಸಿದ ಎಲ್ಲಾ ರೈತರು ತ್ವರಿತವಾಗಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಇಲಾಖೆ ಮನವಿ ಮಾಡಿದೆ.

ಇದನ್ನೂ ಓದಿ: ಬಾಕಿ ಆನೆ ಕಾರ್ಯಪಡೆ ಶೀಘ್ರ ರಚನೆ ಕೋರಿ ಸಿಎಂಗೆ ಶಾಸಕಿ ಭಾಗೀರಥಿ ಮುರುಳ್ಯ ಪತ್ರ
ಇ-ಕೆವೈಸಿ ಮಾಡಿಸಲು ರೈತರು ತಮ್ಮ ಆಧಾರ್ ಕಾರ್ಡ್ಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ಬುಕ್ನ ಜೆರಾಕ್ಸ್ ಪ್ರತಿ ಹಾಗೂ ತಮ್ಮ ಹೆಸರಿನಲ್ಲಿರುವ ಎಲ್ಲಾ ಪಹಣಿ ಪತ್ರಗಳನ್ನು ತೆಗೆದುಕೊಂಡು ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ, ಕಂದಾಯ ಕಚೇರಿ ಅಥವಾ ಕೃಷಿ ಇಲಾಖಾ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಯಾವುದೇ ತೊಂದರೆಗಳು ಎದುರಾದಲ್ಲಿ ಸಂಬಂಧಿತ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆ ಸೂಚಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

