Breaking News

Finn Allen: ಸ್ಫೋಟಕ ಶತಕದೊಂದಿಗೆ ಹಲವು ದಾಖಲೆಗಳನ್ನು ಬರೆದ ಫಿನ್ ಅಲೆನ್

ದಕ್ಷಿಣ ಆಫ್ರಿಕಾ ವಿರುದ್ಧ ಅಬ್ಬರದ ಬ್ಯಾಟಿಂಗ್ ಮಾಡಿ ವೇಗದ ಶತಕ ಸಿಡಿಸಿದ ನ್ಯೂಜಿಲ್ಯಾಂಡ್ ತಂಡದ ಬ್ಯಾಟರ್ ಫಿನ್ ಅಲೆನ್, ಹಲವು ದಾಖಲೆಗಳನ್ನು ಬರೆದಿದ್ದಾರೆ. ಹೌದು, ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನ್ಯೂಜಿಲೆಂಡ್ ಭರ್ಜರಿ ಜಯ ಸಾಧಿಸಿದ್ದು, ಫಿನ್ ಅಲೆನ್ ಅವರ ಸಿಡಿಲಿನ ಶತಕದ ನೆರವಿನಿಂದ ತಂಡ ಫೈನಲ್‌ಗೆ ಪ್ರವೇಶಿಸಿದೆ.

ಕೋಲ್ಕತ್ತಾದ ಈಡೆನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತು. ಪ್ರತಿಯಾಗಿ ಕಣಕ್ಕಿಳಿದ ನ್ಯೂಜಿಲೆಂಡ್, ಕೇವಲ 12.5 ಓವರ್‌ಗಳಲ್ಲಿ 1ವಿಕೆಟ್ ಕಳೆದುಕೊಂಡು 173 ರನ್ ಗಳಿಸಿ, ಇನ್ನೂ 7.1 ಓವರ್ ಬಾಕಿ ಇರುವಾಗಲೇ ಗುರಿ ತಲುಪಿತು.

Advertisement

ಆರಂಭಿಕ ಆಟಗಾರರಾದ ಟಿಮ್ ಸೀಫರ್ಟ್ ಹಾಗೂ ಅಲೆನ್ ಆಕ್ರಮಣಕಾರಿ ಆಟ ಪ್ರದರ್ಶಿಸಿದರು. ಸೀಫರ್ಟ್ 33 ಎಸೆತಗಳಲ್ಲಿ 58 ರನ್ ಗಳಿಸಿ ಔಟಾದರೆ, ಅಲೆನ್ ಅಷ್ಟೇ ಎಸೆತಗಳಲ್ಲಿ ಶತಕ ಸಿಡಿಸಿ ಅಬ್ಬರಿಸಿದರು. ಅವರ ಇನಿಂಗ್ಸ್‌ನಲ್ಲಿ 8 ಸಿಕ್ಸರ್ ಹಾಗೂ 10 ಬೌಂಡರಿಗಳು ಸೇರಿದ್ದವು.

ಈ ಶತಕದೊಂದಿಗೆ ಅಲೆನ್ ಟಿ20 ವಿಶ್ವಕಪ್ ಇತಿಹಾಸದಲ್ಲೇ ವೇಗದ ಶತಕ ಸಿಡಿಸಿದ ಆಟಗಾರರಾಗಿದ್ದಾರೆ. ಪೂರ್ಣ ಸದಸ್ಯ ರಾಷ್ಟ್ರದ ವಿರುದ್ಧ ಅತಿ ವೇಗದ ಶತಕ ಸಿಡಿಸಿದ ದಾಖಲೆಯನ್ನೂ ತಮ್ಮದಾಗಿಸಿಕೊಂಡಿದ್ದಾರೆ. ಈ ಹಿಂದೆ ಭಾರತದ ರೋಹಿತ್ ಶರ್ಮಾ 2017ರಲ್ಲಿ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು.

ನಾಕೌಟ್ ಹಂತದಲ್ಲಿ ಗರಿಷ್ಠ ರನ್ ಗಳಿಸಿದ ದಾಖಲೆಯನ್ನೂ ಅಲೆನ್ ಮುರಿದಿದ್ದಾರೆ. ಈ ಹಿಂದೆ ತಿಲಕರತ್ನೆ ದಿಲ್ಶಾನ್ 2009ರಲ್ಲಿ 96ರನ್ ಹಾಗೂ ವಿರಾಟ್ ಕೊಹ್ಲಿ 2016ರಲ್ಲಿ 89 ರನ್ ಗಳಿಸಿದ್ದರು.

ಟಿ20 ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಪರ ಇದು ಮೂರನೇ ಶತಕವಾಗಿದ್ದು, ಈ ಹಿಂದೆ ಬ್ರೆಂಡನ್ ಮೆಕಲಮ್ ಮತ್ತು ಗ್ಲೇನ್ ಫಿಲಿಪ್ಸ್ ಶತಕ ಸಿಡಿಸಿದ್ದರು.

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು