Breaking News

ರಾಜ್ಯ ರಾಜಕಾರಣ ಸಾಕು, ದೇಶಕ್ಕೆ ನನ್ನ ಸೇವೆ ಬೇಕು: ರಾಜ್ಯಸಭೆಗೆ ಹೋಗುವ ಆಸೆ ವ್ಯಕ್ತಪಡಿಸಿದ ನಿತೀಶ್ ಕುಮಾರ್

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ದೀರ್ಘಕಾಲದ ಆಡಳಿತದ ನಂತರ ಅಚ್ಚರಿಯ ನಿರ್ಧಾರವೊಂದನ್ನು ಪ್ರಕಟಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಬಿಹಾರದ ಜನತೆಗೆ ಧನ್ಯವಾದ ಸಲ್ಲಿಸಿರುವ ಅವರು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸ್ಪಷ್ಟ ಸುಳಿವು ನೀಡಿದ್ದಾರೆ. ಕಳೆದ ಎರಡು ದಶಕಗಳಿಂದ ಬಿಹಾರದ ಜನತೆ ನೀಡಿದ ನಂಬಿಕೆ ಮತ್ತು ಬೆಂಬಲಕ್ಕೆ ನಿತೀಶ್ ಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ. “ನಾನು ಸಂಪೂರ್ಣ ಭಕ್ತಿಯಿಂದ ಸೇವೆ ಸಲ್ಲಿಸಿದ್ದೇನೆ” ಎಂದು ಹೇಳುವ ಮೂಲಕ ಅವರು ತಮ್ಮ ಅಧಿಕಾರಾವಧಿ ಅಂತ್ಯದ ಸುಳಿವು ನೀಡಿದ್ದಾರೆ.

ನಿತೀಶ್ ಕುಮಾರ್ ಅವರು ತಮ್ಮ ಸಂಸದೀಯ ಜೀವನದ ಹೊಸ ಹಂತದ ಬಗ್ಗೆ ಮಾತನಾಡಿದ್ದಾರೆ. “ವಿಧಾನಸಭೆಯ ಎರಡೂ ಸದನಗಳ ಜೊತೆಗೆ ಸಂಸತ್ತಿನ ಎರಡೂ ಸದನಗಳ (ಲೋಕಸಭೆ ಮತ್ತು ರಾಜ್ಯಸಭೆ) ಸದಸ್ಯರಾಗಬೇಕೆಂಬ ಆಸೆ ನನಗಿತ್ತು. ಹಾಗಾಗಿ ನಾನು ರಾಜ್ಯಸಭೆಯ ಸದಸ್ಯರಾಗಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

Advertisement

ಇದನ್ನೂ ಓದಿ: ಬಿಜೆಪಿಯಲ್ಲಿ ‘ಅಭ್ಯರ್ಥಿ ಘೋಷಣೆ’ ಕಿಚ್ಚು: ಯಡಿಯೂರಪ್ಪ ವಿರುದ್ಧ ಸಿಡಿದೆದ್ದ ಸ್ವಪಕ್ಷೀಯ ನಾಯಕರು

ಜೀವನದುದ್ದಕ್ಕೂ ವಂಶಪಾರಂಪರ್ಯ ರಾಜಕೀಯವನ್ನು ವಿರೋಧಿಸುತ್ತಲೇ ಬಂದಿದ್ದ ನಿತೀಶ್ ಕುಮಾರ್, ಈಗ ತಮ್ಮ ಪುತ್ರ ನಿಶಾಂತ್ ಕುಮಾರ್ ಅವರನ್ನು ರಾಜಕೀಯಕ್ಕೆ ತರಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ರಚನೆಯಾಗಲಿರುವ ಹೊಸ ಸರ್ಕಾರಕ್ಕೆ ತಮ್ಮ ಸಂಪೂರ್ಣ ಬೆಂಬಲ ಮತ್ತು ಮಾರ್ಗದರ್ಶನ ಇರುತ್ತದೆ ಎಂದು ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು