ಪುತ್ತೂರು: ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ; ಸಿನಿಮಾ ವೀಕ್ಷಿಸಿದ ವಿದ್ಯಾರ್ಥಿನಿಯರಿಗೆ ಬೆದರಿಕೆ ಕರೆ ಆರೋಪ!

ಪುತ್ತೂರು: ವಿವಾದಿತ ಚಿತ್ರ ‘ದಿ ಕೇರಳ ಸ್ಟೋರಿ’ಯ ಮುಂದುವರಿದ ಭಾಗವಾದ ‘ದಿ ಕೇರಳ ಸ್ಟೋರಿ 2’ ಬಿಡುಗಡೆಯ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೆ ಕಿಡಿ ಹೊತ್ತಿಕೊಂಡಿದೆ. ಪುತ್ತೂರಿನಲ್ಲಿ ಹಿಂದೂ ಸಂಘಟನೆಗಳು ಹಾಗೂ ಸೀತಾ ಪರಿವಾರ ಲವ್ ಜಿಹಾದ್ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಉಚಿತ ಪ್ರದರ್ಶನವು ಈಗ ಬೆದರಿಕೆ ಕರೆಗಳ ವಿವಾದಕ್ಕೆ ಸಾಕ್ಷಿಯಾಗಿದೆ.

ಪುತ್ತೂರಿನ ಚಿತ್ರಮಂದಿರವೊಂದರಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗಾಗಿ ಈ ಸಿನಿಮಾದ ಉಚಿತ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ನೂರಾರು ವಿದ್ಯಾರ್ಥಿನಿಯರು ಈ ಪ್ರದರ್ಶನದಲ್ಲಿ ಭಾಗವಹಿಸಿದ್ದರು.ಸಿನಿಮಾ ವೀಕ್ಷಿಸಲು ಬಂದಿದ್ದ ಕೆಲವು ಯುವತಿಯರಿಗೆ ಅಪರಿಚಿತ ಸಂಖ್ಯೆಗಳಿಂದ ಬೆದರಿಕೆ ಕರೆಗಳು ಬಂದಿವೆ ಎಂದು ಕಾರ್ಯಕ್ರಮದ ಆಯೋಜಕರು ಗಂಭೀರ ಆರೋಪ ಮಾಡಿದ್ದಾರೆ. “ಸಿನಿಮಾ ನೋಡಬೇಡಿ, ನೋಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ” ಎಂದು ಹೆದರಿಸಲಾಗಿದೆ ಎಂದು ಅವರು ದೂರಿದ್ದಾರೆ.

Advertisement

ಇದನ್ನೂ ಓದಿ: “ಭಾರತ ನನಗೆ ಒಂದು ರೀತಿಯಲ್ಲಿ ದ್ರೋಹ ಮಾಡಿದೆ”: ಇರಾನ್ ಮೂಲದ ನಟಿ ಮಂದಾನ ಕರಿಮಿ

ಲವ್ ಜಿಹಾದ್‌ನಂತಹ ಜಾಲಕ್ಕೆ ಸಿಲುಕದಂತೆ ವಿದ್ಯಾರ್ಥಿನಿಯರಲ್ಲಿ ಅರಿವು ಮೂಡಿಸಲು ಈ ಸಿನಿಮಾ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು ಎಂದು ಆಯೋಜಕರು ಸ್ಪಷ್ಟಪಡಿಸಿದ್ದಾರೆ. ವಿವಾದದ ಹಿನ್ನೆಲೆಯಲ್ಲಿ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಚಿತ್ರಮಂದಿರದ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ.

Advertisement

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು