Breaking News

ತಮಿಳುನಾಡಿಗರಿಗೆ ದಳಪತಿ ವಿಜಯ್ ಬಂಪರ್ ಘೋಷಣೆ: ಉಚಿತ ಬಸ್​​​ ಪ್ರಯಾಣ, ಮಗುವಿಗೆ ಚಿನ್ನದ ಉಂಗುರ

ತಮಿಳುನಾಡು ರಾಜಕೀಯದಲ್ಲಿ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಹೊಸ ಸಂಚಲನ ಮೂಡಿಸಿದೆ. ಇಂದು (ಮಾರ್ಚ್ 7, 2026) ಮಹಾಬಲಿಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ್ ಅವರು ಮಹಿಳೆಯರು ಮತ್ತು ಮಕ್ಕಳಿಗಾಗಿ ಹಲವು ಮಹತ್ವಾಕಾಂಕ್ಷೆಯ ಚುನಾವಣೆ ಭರವಸೆಗಳನ್ನು ಘೋಷಿಸಿದ್ದಾರೆ.

ರಾಜ್ಯದ ಎಲ್ಲಾ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣದ ಸೌಲಭ್ಯ. ಮಹಿಳಾ ಸುರಕ್ಷತೆಗಾಗಿ ವಿಶೇಷ ಪಡೆಯ ರಚನೆ. ಈ ಪಡೆಯ ಅಧಿಕಾರಿಗಳು ಬಾಡಿ ಕ್ಯಾಮೆರಾಗಳನ್ನು ಧರಿಸಿ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಒದಗಿಸಲಿದ್ದಾರೆ.

Advertisement

ಸಾರ್ವಜನಿಕ ವಾಹನಗಳಲ್ಲಿ ಪ್ಯಾನಿಕ್ ಬಟನ್ ಅಳವಡಿಕೆ ಮತ್ತು ತುರ್ತು ಸಂದರ್ಭದಲ್ಲಿ 5 ನಿಮಿಷಗಳಲ್ಲಿ ಸಹಾಯ ಸಿಗುವಂತೆ ಕ್ರಮ.ಮಹಿಳಾ ಸ್ವಸಹಾಯ ಸಂಘಗಳಿಗೆ 5 ಲಕ್ಷ ರೂಪಾಯಿವರೆಗೆ ಬಡ್ಡಿರಹಿತ ಸಾಲ. ಸಣ್ಣ ಉದ್ದಿಮೆಗಳಾಗಿ ಬದಲಾಗುವ ಸಂಘಗಳಿಗೆ ವಾರ್ಷಿಕ 5 ಲಕ್ಷ ರೂ.ವರೆಗೆ 100% ಅನುದಾನ.

ಇದನ್ನೂ ಓದಿ: ಬಾಕಿ ಆನೆ ಕಾರ್ಯಪಡೆ ಶೀಘ್ರ ರಚನೆ ಕೋರಿ ಸಿಎಂಗೆ ಶಾಸಕಿ ಭಾಗೀರಥಿ ಮುರುಳ್ಯ ಪತ್ರ

ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳ ಸ್ಥಾಪನೆ ಮತ್ತು ಶಾಲೆ-ಕಾಲೇಜುಗಳ ಮೂಲಕ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ. ತಮಿಳುನಾಡಿನಲ್ಲಿ ಜನಿಸುವ ಪ್ರತಿಯೊಂದು ಮಗುವಿಗೆ ಸರ್ಕಾರದ ವತಿಯಿಂದ ಚಿನ್ನದ ಉಂಗುರ ಉಡುಗೊರೆ. ಮಗುವಿಗೆ ಅಗತ್ಯವಿರುವ ಬಟ್ಟೆ, ಸಾಬೂನು, ಆಟಿಕೆಗಳು ಮತ್ತು ಸೊಳ್ಳೆ ಪರದೆಯನ್ನು ಒಳಗೊಂಡ ಸಂಪೂರ್ಣ ಕಿಟ್ ವಿತರಣೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು