Breaking News

ಕೆಎಸ್‌ಆರ್‌ಟಿಸಿ ಪ್ರೀಮಿಯರ್ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಸರ್ಕಾರದಿಂದ ಗಿಫ್ಟ್

ಬೆಂಗಳೂರು: ಬೆಂಗಳೂರು-ಮಂಗಳೂರು ಸೇರಿದಂತೆ ಆಯ್ದ ಕೆಲವು ಮಾರ್ಗಗಳಲ್ಲಿ ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಮಾರ್ಚ್‌ವರೆಗೆ ಪ್ರೀಮಿಯರ್ ಬಸ್‌ಗಳಲ್ಲಿ ಶೇ.5 ರಿಂದ ಶೇ.15 ಟಿಕೆಟ್ ದರ ಕಡಿತಗೊಳಿಸಿ ಸರ್ಕಾರ ಕೊಡುಗೆ ನೀಡಿದೆ. ಕೆಎಸ್‌ಆರ್‌ಟಿಸಿ ನಿಗಮದ ಪ್ರತಿಷ್ಠಿತ ಸಾರಿಗೆಗಳ ಅಥವಾ ಪ್ರೀಮಿಯರ್ ಬಸ್‌ಗಳ ಪ್ರಯಾಣ ದರಗಳಲ್ಲಿ ಶೇ.5-15 ರಿಯಾಯಿತಿ ಘೋಷಿಸಿದ್ದು, ಜನವರಿಯಿಂದ ಮಾರ್ಚ್‌ವರೆಗೆ ಪ್ರಯಾಣಿಕರ ದಟ್ಟಣೆ ಕಡಿಮೆಯಿರುವ ಹಿನ್ನೆಲೆ ಟಿಕೆಟ್ ದರವನ್ನು ಕಡಿಮೆ ಮಾಡಿದೆ. ಆದರೆ ಈ ದರ ವಾರದ ದಿನಗಳಲ್ಲಿ ಮಾತ್ರ ಅನ್ವಯವಾಗುತ್ತದೆ. ವಾರಾಂತ್ಯಗಳಲ್ಲಿ ಅನ್ವವಾಗುವುದಿಲ್ಲ.

ಇದನ್ನೂ ಓದಿ : Digital Tickets : ಭಾರತೀಯ ರೈಲ್ವೆ ಡಿಜಿಟಲ್ ಟಿಕೆಟ್ ವ್ಯವಸ್ಥೆಯಲ್ಲಿ ಆಕರ್ಷಕ ರಿಯಾಯಿತಿ

Advertisement

ವೋಲ್ವೋ, ಅಂಬಾರಿ, ಕ್ಲಬ್ ಕ್ಲಾಸ್, ಪಲ್ಲಕಿ ಉತ್ಸವ, ಫ್ಲೈ ಬಸ್, ರಾಜಹಂಸ, ನಾನ್ ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್ ಎಸಿ ಸ್ಲೀಪರ್ ಮಾದರಿಯ ಬಸ್‌ಗಳ ಟಿಕೆಟ್ ದರವನ್ನು ಆಯ್ದ ಮಾರ್ಗಗಳಲ್ಲಿ ಕಡಿಮೆ ಮಾಡಲಾಗಿದೆ. ಬೆಂಗಳೂರು, ಮೈಸೂರು, ಮಂಗಳೂರು, ದಾವಣಗೆರೆ ವಿಭಾಗಗಳಲ್ಲೂ ದರ ಅನ್ವಯವಾಗಲಿದೆ. ಜೊತೆಗೆ ಬೆಂಗಳೂರಿನಿಂದ ಇತರ ರಾಜ್ಯಗಳಿಗೆ ಹೊರಡುವ ತಿರುಪತಿ, ಹೈದರಾಬಾದ್, ಪಾಂಡಿಚೇರಿ, ಊಟಿ, ಚೆನೈ ಸೇರಿದಂತೆ ಇಂಟರ್ ಸ್ಟೇಟ್ ಪ್ರೀಮಿಯರ್ ಬಸ್‌ಗಳ ದರ ಕಡಿತವಾಗಿದೆ.

ಪ್ರಮುಖವಾಗಿ ಬೆಂಗಳೂರು ಏರ್‌ಪೋರ್ಟ್‌ಗೆ ಫ್ಲೈ ಬಸ್‌ಗಳ ದರವೂ ಇಳಿಕೆಯಾಗಿದ್ದು, ಬೆಂಗಳೂರು-ಮಂಗಳೂರು, ಬೆಂಗಳೂರು-ಕುಂದಾಪುರ, ಬೆಂಗಳೂರು-ಉಡುಪಿ, ಬೆಂಗಳೂರು-ಧರ್ಮಸ್ಥಳ, ಬೆಂಗಳೂರು-ಕುಕ್ಕೆ ಸುಬ್ರಮಣ್ಯ, ಬೆಂಗಳೂರು-ಪುತ್ತೂರು, ಬೆಂಗಳೂರು-ಮಡಿಕೇರಿ/ವಿರಾಜಪೇಟೆ, ಬೆಂಗಳೂರು-ದಾವಣಗೆರೆ, ಬೆಂಗಳೂರು-ಶಿವಮೊಗ್ಗ/ಸಾಗರ, ಬೆಂಗಳೂರು-ಚೆನ್ನೈ, ಬೆಂಗಳೂರು-ಹೈದರಾಬಾದ್/ಸಿಕಂದರಾಬಾದ್, ಬೆಂಗಳೂರು-ತಿರುಪತಿ, ಬೆಂಗಳೂರು-ಮಂತ್ರಾಲಯ, ಬೆಂಗಳೂರು-ಪೂನಾ/ಮುಂಬೈ, ಬೆಂಗಳೂರು-ವಿಜಯವಾಡ, ಬೆಂಗಳೂರು-ಎರ್ನಾಕುಲಂ, ಬೆಂಗಳೂರು-ಮದುರೈ, ಬೆಂಗಳೂರು-ಕೊಯಿಮತ್ತೂರು, ಬೆಂಗಳೂರು-ತೃಶ್ಶೂರು ಮಾರ್ಗಗಳಲ್ಲಿ ದರ ಕಡಿಮೆ ಮಾಡಲಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು