ಇಂದಿನ ವೇಗದ ಜೀವನಶೈಲಿ, ಕೆಲಸದ ಒತ್ತಡ ಮತ್ತು ಮೊಬೈಲ್ ಬಳಕೆ ಹೆಚ್ಚಳದ ಪರಿಣಾಮವಾಗಿ ಹಲವರಲ್ಲಿ ನಿದ್ರಾಹೀನತೆ (Insomnia) ಸಮಸ್ಯೆ ಹೆಚ್ಚುತ್ತಿರುವುದು ವೈದ್ಯರು ಎಚ್ಚರಿಸಿದ್ದಾರೆ.
ತಜ್ಞರ ಪ್ರಕಾರ, ಪ್ರತಿದಿನ ಕನಿಷ್ಠ 7 ರಿಂದ 8 ಗಂಟೆಗಳ ಗುಣಮಟ್ಟದ ನಿದ್ರೆ ಆರೋಗ್ಯಕ್ಕೆ ಅತ್ಯಂತ ಅಗತ್ಯ. ಸರಿಯಾದ ನಿದ್ರೆ ಇಲ್ಲದಿದ್ದರೆ ದೇಹದಲ್ಲಿ ದಣಿವು, ಕೋಪ, ಏಕಾಗ್ರತೆ ಕೊರತೆ ಹಾಗೂ ಮಾನಸಿಕ ಒತ್ತಡ ಹೆಚ್ಚುವ ಸಾಧ್ಯತೆ ಇದೆ.

ಇದನ್ನೂ ಓದಿ: Lifestyle: ಭಾರತದಲ್ಲಿ ಪುರುಷರಿಗಿಂತ ಹೆಚ್ಚು ಮಹಿಳೆಯರನ್ನು ಕಾಡುವ ನಿದ್ರಾಹೀನತೆ
ವೈದ್ಯರು ಸಲಹೆ ನೀಡುವಂತೆ, ಮಲಗುವ ಮೊದಲು ಮೊಬೈಲ್ ಅಥವಾ ಟಿವಿ ಬಳಕೆಯನ್ನು ಕಡಿಮೆ ಮಾಡುವುದು, ನಿಯಮಿತ ಸಮಯದಲ್ಲಿ ಮಲಗುವುದು ಮತ್ತು ಆರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸುವುದು ಉತ್ತಮ ನಿದ್ರೆಗೆ ಸಹಾಯಕವಾಗುತ್ತದೆ.
ಇದಲ್ಲದೆ, ಪ್ರತಿದಿನ ವ್ಯಾಯಾಮ ಹಾಗೂ ಯೋಗಾಭ್ಯಾಸ ಮಾಡುವುದರಿಂದ ದೇಹ ಮತ್ತು ಮನಸ್ಸಿಗೆ ಶಾಂತಿ ದೊರೆತು ನಿದ್ರೆಯ ಗುಣಮಟ್ಟವೂ ಉತ್ತಮವಾಗುತ್ತದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.
ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

