ಬೆಂಗಳೂರು, ಚೆನ್ನೈ, ಮುಂಬೈ ಹೋಟೆಲ್‌ಗಳಲ್ಲಿ ಗ್ಯಾಸ್ ಅಭಾವ: ಕೇಂದ್ರ ಸರ್ಕಾರದಿಂದ ಮಹತ್ವದ ಸ್ಪಷ್ಟನೆ!

ದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮವಾಗಿ ಭಾರತದ ಪ್ರಮುಖ ನಗರಗಳಾದ ಬೆಂಗಳೂರು, ಚೆನ್ನೈ ಮತ್ತು ಮುಂಬೈನಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಹೋಟೆಲ್ ಉದ್ಯಮ ಸ್ತಬ್ಧವಾಗುವ ಭೀತಿ ಎದುರಾದ ಬೆನ್ನಲ್ಲೇ ಕೇಂದ್ರ ಸರ್ಕಾರವು ಪರಿಸ್ಥಿತಿಯನ್ನು ತಿಳಿಗೊಳಿಸಲು ಮಹತ್ವದ ಕ್ರಮಗಳನ್ನು ಘೋಷಿಸಿದೆ.

ನಾಳೆ ಮಧ್ಯಾಹ್ನದವರೆಗೆ ಮಾತ್ರ ಗ್ಯಾಸ್ ಸ್ಟಾಕ್ ಇದೆ, ಪೂರೈಕೆಯಾಗದಿದ್ದರೆ ಹೋಟೆಲ್ ಬಂದ್ ಅನಿವಾರ್ಯ ಎಂದು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಎಚ್ಚರಿಸಿದೆ. ತಮಿಳುನಾಡು ಮತ್ತು ಮಹಾರಾಷ್ಟ್ರದ ಹೋಟೆಲ್ ಮಾಲೀಕರು ಕೂಡ ಇದೇ ರೀತಿಯ ಸಮಸ್ಯೆ ಎದುರಿಸುತ್ತಿದ್ದು, ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಇದನ್ನೂ ಓದಿ: ಗ್ಯಾಸ್ ಅಭಾವ ತಡೆಗೆ ಕೇಂದ್ರ ಸರ್ಕಾರದ ‘ಮಾಸ್ಟರ್ ಪ್ಲಾನ್’: ಹೊಸ ಮಾರ್ಗಸೂಚಿ

ವಾಣಿಜ್ಯ ಸಿಲಿಂಡರ್‌ಗಳಿಗಿಂತ ಗೃಹಬಳಕೆ (Domestic) ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ಪೂರೈಕೆ ಮಾಡಲು ಸರ್ಕಾರ ಆದೇಶಿಸಿದೆ. ಕಾಳಸಂತೆ ಮತ್ತು ಅಕ್ರಮ ದಾಸ್ತಾನು ತಡೆಯಲು ಎರಡು ಸಿಲಿಂಡರ್ ಬುಕ್ಕಿಂಗ್ ನಡುವಿನ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ. ಅಲ್ಜೀರಿಯಾ, ಆಸ್ಟ್ರೇಲಿಯಾ, ಕೆನಡಾ ಮತ್ತು ನಾರ್ವೆ ದೇಶಗಳು ಭಾರತಕ್ಕೆ ಎಲ್‌ಪಿಜಿ ಪೂರೈಸಲು ಮುಂದೆ ಬಂದಿದ್ದು, ಶೀಘ್ರವೇ ಆಮದು ಪ್ರಕ್ರಿಯೆ ಆರಂಭವಾಗಲಿದೆ.ದೇಶೀಯ ತೈಲ ಸಂಸ್ಕರಣಾಗಾರಗಳಿಗೆ (Refineries) ಉತ್ಪಾದನೆಯನ್ನು ಗರಿಷ್ಠ ಮಟ್ಟಕ್ಕೆ ಏರಿಸಲು ಸೂಚಿಸಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು