ಕರಾವಳಿ ಪ್ರವಾಸೋದ್ಯಮದ ಮೇಲೆ ಗಲ್ಫ್‌ ಯುದ್ಧದ ಕರಿಛಾಯೆ! ಏನಾಯ್ತು?

mangaluru tourism

ಮಂಗಳೂರು: ಗಲ್ಫ್ ಪ್ರದೇಶದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಕರಾವಳಿ ಭಾಗದ ಪ್ರವಾಸೋದ್ಯಮ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಬಜ್ಪೆ) ಗಲ್ಫ್ ರಾಷ್ಟ್ರಗಳಿಗೆ ಇರುವ ವಿಮಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ಕೆಲವು ಅರಬ್ ದೇಶಗಳಿಗೆ ವಿಮಾನ ಸಂಪರ್ಕ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಮಾರ್ಚ್ ತಿಂಗಳಲ್ಲಿ ಪ್ರವಾಸಿಗರ ಹಾಗೂ ವಿದೇಶ ಪ್ರಯಾಣಿಕರ ಸಂಖ್ಯೆಯಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ.

ಸಾಮಾನ್ಯವಾಗಿ ಮಾರ್ಚ್‌ನಿಂದ ಮೇ ವರೆಗೆ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಇರುವುದರಿಂದ ವಿದೇಶ ಪ್ರವಾಸಕ್ಕೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತದೆ. ಆದರೆ ಈ ವರ್ಷ ಗಲ್ಫ್ ಪ್ರದೇಶದ ಅಶಾಂತಿಯ ಹಿನ್ನೆಲೆಯಲ್ಲಿ ಅನೇಕರು ಅರಬ್ ಹಾಗೂ ಯುರೋಪ್ ದೇಶಗಳಿಗೆ ಬುಕ್ ಮಾಡಿದ್ದ ವಿಮಾನ ಟಿಕೆಟ್‌ಗಳನ್ನು ರದ್ದುಪಡಿಸಿದ್ದಾರೆ ಎಂದು ಪ್ರವಾಸೋದ್ಯಮ ಕ್ಷೇತ್ರದ ಮೂಲಗಳು ತಿಳಿಸಿವೆ.

Advertisement

ಇದನ್ನೂ ಓದಿ: ಅಪರೂಪದಲ್ಲಿ ಅಪರೂಪ! 25 ವರ್ಷದ ಗರ್ಭಿಣಿ ಜನ್ಮ ನೀಡಿದ ಮಗುವಿನ ಕೆಜಿ ಎಷ್ಟು ಗೊತ್ತಾ?

ರಮಝಾನ್ ಹಿನ್ನೆಲೆ ಪ್ರಯಾಣಿಕರ ಮೇಲೆ ಪರಿಣಾಮ

ಗಲ್ಫ್ ದೇಶಗಳಲ್ಲಿ ಉದ್ಯೋಗದಲ್ಲಿರುವ ಮುಸ್ಲಿಂ ಸಮುದಾಯದ ಅನೇಕರು ಸಾಮಾನ್ಯವಾಗಿ ರಮಝಾನ್ ತಿಂಗಳಲ್ಲಿ ತಮ್ಮ ಊರಿಗೆ ಮರಳುತ್ತಾರೆ. ಆದರೆ ಈ ಬಾರಿ ವಿಮಾನ ಸೇವೆಗಳಲ್ಲಿ ವ್ಯತ್ಯಯ ಉಂಟಾದ ಕಾರಣ ಹಲವರು ತಮ್ಮ ಸ್ವಗ್ರಾಮಗಳಿಗೆ ಬರಲು ಸಾಧ್ಯವಾಗಿಲ್ಲ.

ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಡೆತ

ಈ ಕಾರಣಗಳಿಂದ ಕರಾವಳಿ ಪ್ರದೇಶದಿಂದ ಗಲ್ಫ್ ದೇಶಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹಾಗೂ ಮಂಗಳೂರು ಭಾಗಕ್ಕೆ ಬರುವವರ ಸಂಖ್ಯೆಯಲ್ಲೂ ಗಣನೀಯ ಕುಸಿತ ಕಂಡುಬಂದಿದೆ ಎಂದು ಪ್ರವಾಸೋದ್ಯಮ ಉದ್ಯಮದ ಪ್ರತಿನಿಧಿಗಳು ತಿಳಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿ ಮುಂದುವರೆದರೆ ಮುಂದಿನ ಕೆಲವು ವಾರಗಳಿಗೂ ಪ್ರವಾಸೋದ್ಯಮ ಮತ್ತು ವಿಮಾನ ಪ್ರಯಾಣದ ಮೇಲೆ ಪರಿಣಾಮ ಮುಂದುವರಿಯುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು