ಶೌಚಾಲಯಕ್ಕೆ ಎಳೆದೊಯ್ದು ಅಪ್ರಾಪ್ತೆ ಮೇಲೆ ಸಾಮೂಜಿಕ ಅತ್ಯಾಚಾರ, ಬಳಿಕ ಬಾವಿಗೆ ತಳ್ಳಿದ ಆರೋಪಿಗಳು

bihar-saran-gangrape-murder-class10-student

ಬಿಹಾರ: ಸಾರಣ್ ಜಿಲ್ಲೆಯಲ್ಲಿ 10ನೇ ತರಗತಿ ಓದುತ್ತಿದ್ದ 16 ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಆಕೆಯನ್ನು ಕೊಲೆ ಮಾಡಿದ ಭೀಕರ ಘಟನೆ ನಡೆದಿದೆ. ಈ ದಾರುಣ ಘಟನೆ ಬುಧವಾರ ಸಂಜೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಅದೇ ಗ್ರಾಮದ ಐವರು ಆರೋಪಿಗಳು ವಿದ್ಯಾರ್ಥಿನಿಯನ್ನು ಬಲವಂತವಾಗಿ ಬಾತ್‌ರೂಮ್‌ಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ನಂತರ ಸಾಕ್ಷಿ ನಾಶಕ್ಕಾಗಿ ಆಕೆಯನ್ನು ಬಾವಿಗೆ ತಳ್ಳಲಾಗಿದ್ದು, ಇದರಿಂದಾಗಿ ಆಕೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಕೃತ್ಯದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತೆಯ ಅಪಹರಣ, ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

ಘಟನೆಯ ವಿಷಯ ಗ್ರಾಮಸ್ಥರಿಗೆ ತಿಳಿಯುತ್ತಿದ್ದಂತೆ ಅವರು ಆಕ್ರೋಶ ವ್ಯಕ್ತಪಡಿಸಿ ಗದ್ದಲ ಸೃಷ್ಟಿಸಿದರು. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಪೊಲೀಸರು ಪ್ರಕರಣ ಸಂಬಂಧ ಒಬ್ಬ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು