ಪುತ್ತೂರು: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಸಾಮೆತಡ್ಕ ನಿವಾಸಿ ಶಶಿಕುಮಾರ್ ಅವರಿಗೆ “ಅರುಣ ಸಾರಥಿ” ಚಾಲಕರ ಸಂಘಟನೆಯ ವತಿಯಿಂದ 10,000 ಧನಸಹಾಯ ನೀಡಲಾಯಿತು. ಈ ಧನಸಹಾಯವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಅವರ ಉಪಸ್ಥಿತಿಯಲ್ಲಿ ಹಸ್ತಾಂತರಿಸಲಾಯಿತು.
ಸಂಘಟನೆಯು ಸಮಾಜದಲ್ಲಿರುವ ಅಶಕ್ತರು ಹಾಗೂ ಸಂಕಷ್ಟದಲ್ಲಿರುವವರಿಗೆ ನೆರವಾಗುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದು, ಈವರೆಗೆ ಒಟ್ಟು 1,70,000 ಧನಸಹಾಯವನ್ನು ವಿವಿಧ ಅಗತ್ಯವಿರುವವರಿಗೆ ನೀಡಲಾಗಿದೆ.

ಇದನ್ನೂ ಓದಿ: ಪಾರ್ಶ್ವವಾಯು ಪೀಡಿತ ಜಿನ್ನಪ್ಪ ನಾಯ್ಕರಿಗೆ ಅರುಣ ಸಾರಥಿ ಚಾಲಕರ ಸಂಘಟನೆಯಿಂದ ನೆರವು
ಈ ಸಂದರ್ಭದಲ್ಲಿ ಸಂಘಟನೆಯ ಸದಸ್ಯರಾದ ಸಂದೇಶ್ ನಾಯ್ಕ ಕೆಯ್ಯೂರು, ಸ್ವಸ್ತಿಕ್ ತಾರಿಗುಡ್ಡೆ, ಜಯಂತ ಆರ್ಲಪದವು, ಯೋಗೀಶ್ ಸಂಪ್ಯ ಹಾಗೂ ಟ್ರಸ್ಟ್‌ನ ಉಪಾಧ್ಯಕ್ಷ ರವಿ ಕುಮಾರ್ ರೈ ಕೆದಂಬಾಡಿ ಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

