Breaking News

ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ: ಸಂತ್ರಸ್ತೆಯ ಅಪ್ರಾಪ್ತ ಮಗಳ ಮೇಲೂ ಕಣ್ಣು!

ಮೂಡಬಿದ್ರೆ: ರಕ್ಷಕನೇ ಭಕ್ಷಕನಾದ ದಾರುಣ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ಬೆಳಕಿಗೆ ಬಂದಿದೆ. ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಎಂಬುವವರು ಸಂತ್ರಸ್ತ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವುದಲ್ಲದೆ, ಆಕೆಯ ಅಪ್ರಾಪ್ತ ಮಗಳ ಮೇಲೂ ಕಣ್ಣು ಹಾಕಿರುವ ಆಘಾತಕಾರಿ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನ್ಯಾಯ ಕೇಳಿ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬರ ಅಸಹಾಯಕತೆಯನ್ನು ಬಂಡವಾಳ ಮಾಡಿಕೊಂಡ ಇನ್ಸ್‌ಪೆಕ್ಟರ್ ಸಂದೇಶ್, ಆಕೆಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ವೈರಲ್ ಆಗಿರುವ ಆಡಿಯೋದಲ್ಲಿ ಇನ್ಸ್‌ಪೆಕ್ಟರ್, ಮಹಿಳೆಯ ಅಪ್ರಾಪ್ತ ಮಗಳನ್ನು ತನ್ನ ಬಳಿ ಕಳುಹಿಸುವಂತೆ ಪೀಡಿಸುತ್ತಿರುವುದು ಸ್ಪಷ್ಟವಾಗಿ ಕೇಳಿಸುತ್ತಿದೆ. “ನಿನ್ನ ಮಗಳು ಚೆನ್ನಾಗಿದ್ದಾಳೆ, ಆಕೆಯನ್ನು ಕರೆದುಕೊಂಡು ಬಾ” ಎಂಬರ್ಥದ ಮಾತುಗಳು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇಂತಹ ವಿಕೃತ ಮನಸ್ಥಿತಿಯ ಅಧಿಕಾರಿಯನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಿ, ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ಮಹೇಶ್ ಶೆಟ್ಟಿ ತಿಮರೋಡಿಗೆ ಎಸ್‌ಐಟಿಯಿಂದ 3ನೇ ನೋಟಿಸ್: ವಿಚಾರಣೆಗೆ ಹಾಜರಾಗದಿದ್ದರೆ ಬಂಧನ!

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *