ಪುತ್ತೂರು: ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ; ಐದು ವರ್ಷದ ಪುಟ್ಟ ಬಾಲಕಿ ಸಾವು,

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ವರ್ಷದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ದ್ವಿಚಕ್ರ ವಾಹನಕ್ಕೆ ಕಾರೊಂದು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.ತಣ್ಣೀರುಪಂತ ಗ್ರಾಮದ ಕೊಡಂಗೆ ನಿವಾಸಿ ಇಸ್ಮಾಯಿಲ್ (60) ಅವರು ತಮ್ಮ ಮಗಳು ಸಾಜಿರಾ (33) ಮತ್ತು ಮೊಮ್ಮಗಳು ಸುಹೈರಾ (5) ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ವೇಣೂರು ಮೂಲದ ಶಿವಪ್ರಸಾದ್ ಎಂಬುವವರು ಚಲಾಯಿಸುತ್ತಿದ್ದ ಕಾರು ಅತೀ ವೇಗದಿಂದ ಬಂದು ಇವರ ವಾಹನಕ್ಕೆ ಢಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಸುಹೈರಾ ತಲೆಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಸೋಮವಾರ ರಾತ್ರಿ ಬಾಲಕಿ ಮೃತಪಟ್ಟಿದ್ದಾಳೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಇಸ್ಮಾಯಿಲ್ ಮತ್ತು ಸಾಜಿರಾ ಅವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Advertisement

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು