ಬೆಂಗಳೂರು: ರಾಜ್ಯದಾದ್ಯಂತ ಸುಮಾರು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂದು ತಮ್ಮ ಮೊದಲ ಭಾಷೆಯ ಪರೀಕ್ಷೆಯೊಂದಿಗೆ ಎಸ್‌ಎಸ್‌ಎಲ್‌ಸಿ ಪಯಣ ಆರಂಭಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಭದ್ರತೆ ಹಾಗೂ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ. ಇಂದು (ಮಾರ್ಚ್ 18) ಪ್ರಥಮ ಭಾಷೆ ಪರೀಕ್ಷೆಯೊಂದಿಗೆ ಆರಂಭವಾಗಿ, ಏಪ್ರಿಲ್ ಮೊದಲ ವಾರದವರೆಗೆ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 10:15 ರಿಂದ ಮಧ್ಯಾಹ್ನ 1:30 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಓದಲು ಮೊದಲ 15 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ.
ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ 144ನೇ ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಮತ್ತು ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ. ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಕೆಲವೊಂದು ನಿಯಮಗಳನ್ನು ಮಾಡಿದೆ. ಈ ವಿಚಾರಗಳನ್ನು ವಿದ್ಯಾರ್ಥಿಗಳು ಗಮನಿಸಬೇಕು. ಪ್ರವೇಶ ಪತ್ರ (Hall Ticket) ಇಲ್ಲದೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶವಿರುವುದಿಲ್ಲ. ಪರೀಕ್ಷೆ ಆರಂಭವಾಗುವ ಕನಿಷ್ಠ 45 ನಿಮಿಷಗಳ ಮುಂಚಿತವಾಗಿ ಕೇಂದ್ರಕ್ಕೆ ತಲುಪುವುದು ಕಡ್ಡಾಯ.

ಇದನ್ನೂ ಓದಿ: ಉನ್ನತ ಶಿಕ್ಷಣಕ್ಕೆ ಬಲ; 2,000 ಬೋಧಕ ಸಿಬ್ಬಂದಿ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಅಸ್ತು!
ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಅಥವಾ ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಕೆಎಸ್‌ಆರ್‌ಟಿಸಿ (KSRTC) ಮತ್ತು ಬಿಎಂಟಿಸಿ (BMTC) ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಲಾಗಿದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

