ಚಪ್ಪಲಿಯೊಳಗೆ ಮೊಬೈಲ್ ಅಡಗಿಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಸಿಕ್ಕಿಬಿದ್ದದ್ದು ಹೇಗೆ?

ರಿಷಿಕೇಶ: ಪ್ರತಿಷ್ಠಿತ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ರಿಷಿಕೇಶದಲ್ಲಿ ನಡೆದ ಪ್ರವೇಶ ಪರೀಕ್ಷೆಯ ವೇಳೆ ವಿದ್ಯಾರ್ಥಿಯೊಬ್ಬ ಚಪ್ಪಲಿಯಲ್ಲಿ ಮೊಬೈಲ್ ಫೋನ್ ಅಡಗಿಸಿಟ್ಟು ವಂಚಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ತಪಾಸಣಾ ಸಮಯದಲ್ಲಿ ಈ ಚಾಣಾಕ್ಷತನ ಬಯಲಿಗೆ ಬಂದಿದ್ದು, ವಿದ್ಯಾರ್ಥಿಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ವಿದ್ಯಾರ್ಥಿಯು ತನ್ನ ಚಪ್ಪಲಿಯ ಸೋಲ್ (Slipper Sole) ಒಳಗೆ ವಿಶೇಷವಾಗಿ ಜಾಗವನ್ನು ಮಾಡಿ, ಅಲ್ಲಿ ಅತ್ಯಂತ ಸಣ್ಣ ಗಾತ್ರದ ಮೊಬೈಲ್ ಫೋನ್ ಮತ್ತು ಬ್ಲೂಟೂತ್ ಸಾಧನವನ್ನು ಅಡಗಿಸಿಟ್ಟಿದ್ದನು.ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ಮೆಟಲ್ ಡಿಟೆಕ್ಟರ್ ಮೂಲಕ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದಾಗ ಸದ್ದು ಕೇಳಿಬಂದಿದೆ. ಅಧಿಕಾರಿಗಳು ಚಪ್ಪಲಿಯನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಮೊಬೈಲ್ ಇರುವುದು ಪತ್ತೆಯಾಗಿದೆ.

ಇದನ್ನೂ ಓದಿ: ರೀಲ್ಸ್ ಹುಚ್ಚಿಗೆ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್; ಯುವಕನ ದುರಂತ ಅಂತ್ಯ!

ಇಲ್ಲಿದೆ ನೋಡಿ ವಿಡಿಯೋ:

ಪರೀಕ್ಷಾ ಕೇಂದ್ರದ ಅಧಿಕಾರಿಗಳು ತಕ್ಷಣವೇ ಆ ವಿದ್ಯಾರ್ಥಿಯನ್ನು ಪರೀಕ್ಷೆಯಿಂದ ಹೊರಹಾಕಿದ್ದು, ಅಕ್ರಮದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈತ ಯಾರ ಸಹಾಯದಿಂದ ಈ ಸಂಚು ರೂಪಿಸಿದ್ದ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ವೈದ್ಯಕೀಯ ಪರೀಕ್ಷೆಗಳಂತಹ ಅತ್ಯುನ್ನತ ಮಟ್ಟದ ಪರೀಕ್ಷೆಗಳಲ್ಲಿ ಇಂತಹ ಅಕ್ರಮಗಳು ನಡೆಯುತ್ತಿರುವುದು ಪರೀಕ್ಷಾ ಮಂಡಳಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು