Breaking News

Kollamogru : ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರ ವಿಲೀನಕ್ಕೆ ವಿರೋಧ

ಕೊಲ್ಲಮೊಗ್ರು : ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್‌ಸಿ)ವು ಭಾರತದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಅಡಿಪಾಯವಾಗಿದ್ದು, ಗ್ರಾಮೀಣ ಮತ್ತು ಕಡಿಮೆ‌ ಜನರಿರುವ ಅರೆ ನಗರ ಪ್ರದೇಶಗಳ ಜನರಿಗೆ ಮೂಲಭೂತ ಆರೋಗ್ಯ ಸೇವೆಗಳನ್ನು ಒದಗಿಸುವ ಪ್ರಮುಖ ಸಂಸ್ಥೆಯಾಗಿದೆ. ಸಾಮಾನ್ಯವಾಗಿ 20,000–30,000 ಜನಸಂಖ್ಯೆಯನ್ನು ಒಳಗೊಂಡ ಪ್ರದೇಶಕ್ಕೆ ಒಂದು ಪಿಎಚ್‌ಸಿ ಕಾರ್ಯನಿರ್ವಹಿಸುತ್ತದೆ. ಆರೋಗ್ಯ ಸೇವೆಗಳು ಎಲ್ಲರಿಗೂ ಸುಲಭವಾಗಿ, ಕಡಿಮೆ ವೆಚ್ಚದಲ್ಲಿ ಮತ್ತು ಸಮಯಕ್ಕೆ ಸರಿಯಾಗಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಪಿಎಚ್‌ಸಿಗಳನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ : ದೇವರಾಜು ಅರಸು ಅಧಿಕಾರಾವಧಿ ದಾಖಲೆ ಮುರಿದ ಸಿದ್ದರಾಮಯ್ಯ; ರಾಜ್ಯದ ದೀರ್ಘಾವಧಿ ಸಿಎಂ

Advertisement

ಕೊಲ್ಲಮೊಗ್ರು ಭಾಗದಲ್ಲಿ ಪ್ರತಿಭಟನೆ ;

ಅಲ್ಲದೇ, ಇಲ್ಲೊಂದು ಕಡೆ ಪ್ರಾಥಮಿಕ ಆರೋಗ್ಯ ಕೇಂದ್ರದ‌ ವಿಲೀನಕ್ಕೆ ಮುಂದಾಗಿರುವುದಕ್ಕೆ ವಿರೋಧ ವ್ಯಕ್ತವಾಗಿದೆ. ಹೌದು… ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಗುತ್ತಿಗಾರು ಅಥವಾ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದೊಂದಿಗೆ ವಿಲೀನಗೊಳಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇರುವುದಾಗಿ ವರದಿಯಾಗಿದ್ದು ಇದಕ್ಕೆ ಸಂಬಂಧಿಸಿ ಕೊಲ್ಲಮೊಗ್ರು ಭಾಗದಲ್ಲಿ ಪ್ರತಿಭಟನೆ ಮಾಡಲು ಮುಂದಾಗಿರುವುದು ತಿಳಿದು ಬಂದಿದೆ.

ಈ ಬಗ್ಗೆ ಈಗಾಗಲೇ ಇದಕ್ಕೆ ವಿರೋಧ ವ್ಯಕ್ತಪಡಿಸಿ ಮನವಿ ಸಲ್ಲಿಸಿರುವುದಾಗಿ ತಿಳಿದು ಬಂದಿದೆ. ಇತ್ತೀಚೆಗೆ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕುಲದೀಪ್ ಅವರು ವೇತನ ಪಾವತಿಯಾಗಿಲ್ಲ ಎಂದು ರಾಜೀನಾಮೆ ಸಲ್ಲಿಸಿದ್ದರು. ಈಗಾಗಲೇ ಅದು ದೊಡ್ಡ ಸುದ್ದಿಯಾಗಿದ್ದು ಆ ಬಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಿಲೀನ ದ ಬಗ್ಗೆ ಸರ್ಕಾರದ ಪ್ರಸ್ತಾಪ ಇರುವುದು ಪ್ರಚಾರ ಪಡೆದಿದ್ದು ಈ ಬಗ್ಗೆ ಈ ಊರಿನ ಜನರು ವಿಲೀನ ಪ್ರಸ್ತಾಪ ಕೈ ಬಿಡುವಂತೆ ಪ್ರತಿಭಟನೆ ನಡೆಸಲು ಮುಂದಾಗಿರುವುದಾಗಿ ತಿಳಿದು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು