ಎರಡು ಕ್ಷೇತ್ರಗಳಿಗೆ ಉಪಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿರುವ ಎರಡು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಬಾಗಲಕೋಟೆ ಕ್ಷೇತ್ರಕ್ಕೆ ಮಾಜಿ ಶಾಸಕ ವೀರಣ್ಣ ಚರಂತಿಮಠ್ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ಹಿರಿಯ ನಾಯಕ ಮತ್ತು ಮಾಜಿ ಶಾಸಕ ವೀರಣ್ಣ ಚರಂತಿಮಠ್ ಅವರಿಗೆ ಪಕ್ಷವು ಮತ್ತೆ ಮಣೆ ಹಾಕಿದೆ. ಕ್ಷೇತ್ರದಲ್ಲಿನ ಅವರ ಪ್ರಭಾವ ಮತ್ತು ಲಿಂಗಾಯತ ಸಮುದಾಯದ ಬೆಂಬಲವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಕ್ಷೇತ್ರದಲ್ಲಿ ಅಚ್ಚರಿಯ ಆಯ್ಕೆ ಎಂಬಂತೆ ರಾಜ್ಯ ಬಿಜೆಪಿ ಎಸ್‌ಟಿ ಮೋರ್ಚಾದ ಉಪಾಧ್ಯಕ್ಷ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಸಾಮಾನ್ಯ ಕ್ಷೇತ್ರವಾಗಿದ್ದರೂ ಇಲ್ಲಿ ಎಸ್‌ಟಿ ಸಮುದಾಯಕ್ಕೆ ಆದ್ಯತೆ ನೀಡುವ ಮೂಲಕ ಬಿಜೆಪಿ ಹೊಸ ತಂತ್ರ ಅನುಸರಿಸಿದೆ.

Advertisement

ಇದನ್ನೂ ಓದಿ: ಬೆಳ್ತಂಗಡಿ: ದೊಡ್ಡ ಕೆರೆಯಲ್ಲಿ ಮೀನುಗಳ ಸಾವು! ತನಿಖೆಗೆ ಆಗ್ರಹ

ಈ ಎರಡೂ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ದಾವಣಗೆರೆ ದಕ್ಷಿಣದಲ್ಲಿ ಎಂ.ಪಿ. ರೇಣುಕಾಚಾರ್ಯ ಬಣದ ಒತ್ತಡವಿದ್ದರೂ, ಹೈಕಮಾಂಡ್ ಜಿ.ಎಂ. ಸಿದ್ದೇಶ್ವರ ಆಪ್ತ ವಲಯದ ದಾಸಕರಿಯಪ್ಪ ಅವರಿಗೆ ಮಣೆ ಹಾಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು