‘ಕರ್ನಾಟಕ ಕಾಂಗ್ರೆಸ್ ಹೈಕಮಾಂಡ್ ಪಾಲಿನ ಎಟಿಎಂ’: ಡಿಕೆಶಿ ವಿರುದ್ಧ ಐಶ್ವರ್ಯಾ ಅನಂತ ಕುಮಾರ್ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಸರ್ಕಾರವು ತೀವ್ರ ಸಾಲದ ಸುಳಿಗೆ ಸಿಲುಕಿದ್ದರೂ, ಪಂಚ ರಾಜ್ಯಗಳ ಚುನಾವಣಾ ವೆಚ್ಚಕ್ಕಾಗಿ ಕರ್ನಾಟಕದ ಹಣವನ್ನು ಬಳಸಲಾಗುತ್ತಿದೆ ಎಂದು ಬಿಜೆಪಿ ನಾಯಕಿ ಐಶ್ವರ್ಯಾ ಅನಂತ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕವನ್ನು ಕೇವಲ ‘ಕ್ಯಾಶ್ ಕೌ’ (Cash Cow) ಅಥವಾ ಹಣ ಕೊಡುವ ಕಾಮಧೇನುವನ್ನಾಗಿ ಮಾಡಿಕೊಂಡಿದೆ ಎಂದು ಅವರು ಕಿಡಿಕಾರಿದ್ದಾರೆ.

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಕರ್ನಾಟಕದಿಂದ ಹಣ ರವಾನೆಯಾಗುತ್ತಿದೆ ಎಂಬ ಆರೋಪಕ್ಕೆ ಐಶ್ವರ್ಯಾ ದನಿಯೂಡಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಬಳಕೆಯಾಗಬೇಕಾದ ಹಣ ಪರರಾಜ್ಯಗಳ ಚುನಾವಣೆಗೆ ಹೋಗುತ್ತಿರುವುದು ದುರದೃಷ್ಟಕರ ಎಂದಿದ್ದಾರೆ.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ, ರಾಜ್ಯ ಸಾಲದಲ್ಲಿದ್ದರೂ ನೀವೇಕೆ ಹೈಕಮಾಂಡ್‌ಗೆ ಹಣ ನೀಡುವ ಪಾತ್ರ ನಿರ್ವಹಿಸುತ್ತಿದ್ದೀರಿ?” ಎಂದು ಅವರು ನೇರವಾಗಿ ಪ್ರಶ್ನಿಸಿದ್ದಾರೆ.

Advertisement

ಇದನ್ನೂ ಓದಿ: ಎರಡು ಕ್ಷೇತ್ರಗಳಿಗೆ ಉಪಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಐಶ್ವರ್ಯಾ ಅನಂತ ಕುಮಾರ್ ಎಕ್ಸ್​​ ಪೋಸ್ಟ್​ ಇಲ್ಲಿದೆ:

ಗ್ಯಾರಂಟಿ ಯೋಜನೆಗಳು ಮತ್ತು ಇತರ ವೆಚ್ಚಗಳಿಂದಾಗಿ ರಾಜ್ಯದ ಖಜಾನೆ ಖಾಲಿಯಾಗುತ್ತಿದೆ ಎಂಬ ಆತಂಕದ ನಡುವೆಯೇ ಈ ರಾಜಕೀಯ ವಾಗ್ದಾಳಿ ನಡೆದಿದೆ.ಐಶ್ವರ್ಯಾ ಅನಂತ ಕುಮಾರ್ ಅವರ ಈ ಹೇಳಿಕೆಯು ಬಿಜೆಪಿಗೆ ಹೊಸ ಅಸ್ತ್ರ ನೀಡಿದಂತಾಗಿದೆ. ಚುನಾವಣೆಗಳು ಸಮೀಪಿಸುತ್ತಿರುವ ಅಸ್ಸಾಂ ಸೇರಿದಂತೆ ಇತರ ರಾಜ್ಯಗಳಲ್ಲಿ ಕರ್ನಾಟಕದ ಹಣ ಬಳಕೆಯಾಗುತ್ತಿದೆ ಎಂಬ ವಾದಕ್ಕೆ ಈ ಹೇಳಿಕೆ ಮತ್ತಷ್ಟು ಪುಷ್ಟಿ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು