ಬೆಂಗಳೂರು: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ಸಾರ್ವಜನಿಕರ ಸುರಕ್ಷತೆ ಪ್ರಶ್ನಾರ್ಹವಾಗಿದೆಯೇ ಎಂಬ ಅನುಮಾನ ಮೂಡುವಂತಹ ಘಟನೆಯೊಂದು ನಡೆದಿದೆ. ಮದ್ಯಪಾನ ಮಾಡಿ ಅಡ್ಡಾದಿಡ್ಡಿಯಾಗಿ ಬಸ್ ಚಲಾಯಿಸುತ್ತಿದ್ದ ಬಿಎಂಟಿಸಿ ಚಾಲಕನೊಬ್ಬ, ಅದನ್ನು ಪ್ರಶ್ನಿಸಿದ ಮಹಿಳಾ ಪ್ರಯಾಣಿಕರ ಜೊತೆ ಕಿರಿಕ್ ಮಾಡಿರುವ ಘಟನೆ ಟಿನ್ ಫ್ಯಾಕ್ಟರಿ ಬಳಿ ಸಂಭವಿಸಿದೆ. ಮಾರ್ಚ್ 18ರ ಬುಧವಾರ ರಾತ್ರಿ 7:30ರ ಸುಮಾರಿಗೆ ಟಿನ್ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದೆ.
KA-57-F-3660 ಸಂಖ್ಯೆಯ ಬಿಎಂಟಿಸಿ ಬಸ್ ಚಾಲಕ ಮದ್ಯಪಾನ ಮಾಡಿದ ಅಮಲಿನಲ್ಲಿ ಅಡ್ಡಾದಿಡ್ಡಿಯಾಗಿ ಬಸ್ ಚಲಾಯಿಸುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಮಹಿಳೆಯೊಬ್ಬರು ಬಸ್ ನಿಲ್ಲಿಸುವಂತೆ ಕೇಳಿಕೊಂಡಿದ್ದಾರೆ. ಬಸ್ ನಿಲ್ಲಿಸುವ ಬದಲು ಚಾಲಕ ಮಹಿಳೆಯ ಜೊತೆ ವಾಗ್ವಾದಕ್ಕಿಳಿದಿದ್ದಾನೆ. ಚಾಲಕನ ವರ್ತನೆಯನ್ನು ಮಹಿಳೆ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕಡಬ: ತಲೆನೋವಿನ ಔಷಧ ಸೇವಿಸಿ ನೋವಿನಲ್ಲಿ ತೊಳಲಾಡಿ ಬಾಲಕ ಸಾವು
ಚಾಲಕ ನಿಜಕ್ಕೂ ಕುಡಿದಿದ್ದನೇ ಅಥವಾ ಕೆಲಸದ ಒತ್ತಡದಿಂದ ಹೀಗೆ ವರ್ತಿಸಿದ್ದನೇ ಎಂಬುದು ಉನ್ನತ ಮಟ್ಟದ ತನಿಖೆಯಿಂದ ತಿಳಿಯಬೇಕಿದೆ. ಬಿಎಂಟಿಸಿ ಅಧಿಕಾರಿಗಳು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

